|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ‘ನಿಟ್ಟೆ ಎಕ್ಸ್‌ಪ್ರೊ- 2022’

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ‘ನಿಟ್ಟೆ ಎಕ್ಸ್‌ಪ್ರೊ- 2022’


ನಿಟ್ಟೆ: ‘ವಿದ್ಯಾರ್ಥಿಜೀವನದಲ್ಲಿ ವಿವಿಧ ಬಗೆಯ ಸಂಶೋಧನಾ ಪ್ರಯತ್ನಗಳನ್ನು ನಡೆಸುವುದು ಅತಿಮುಖ್ಯ ಕಲಿಕಾ ಪ್ರಕ್ರಿಯೆ. ಮುಂಬರುವ ವಿವಿಧ-ವಿನೂತನ ಯೋಜನೆಗಳಿಗೆ ಇಂದು ನಡೆಯುತ್ತಿರುವಂತಹ ಪ್ರಾಜೆಕ್ಟ್ ಪ್ರದರ್ಶನಗಳು ಪ್ರೇರಣೆಯಾಗಲಿದೆ’ ಎಂದು ಮಣಿಪಾಲ ತಾಂತ್ರಿಕ ಕಾಲೇಜಿನ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ವಿಭಾಗದ ಪ್ರಾಧ್ಯಾಪಕ ಡಾ. ಎಂ.ಸತೀಶ್ ಕುಮಾರ್ ಅಭಿಪ್ರಾಯಪಟ್ಟರು.


ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಹಳೆವಿದ್ಯಾರ್ಥಿ ಸಂಘ ‘ವಿನಮಿತ’ದ ಸಹಯೋಗದೊಂದಿಗೆ ಸುಮಾರು 30 ವರ್ಷಗಳಿಂದ ನಡೆಸಿಕೊಂಡು ಬಂದಿರುವ ‘ಎಕ್ಸ್‍ಪ್ರೊ’ ಎಂಬ ಅಂತಿಮ ಬಿ.ಇ ವಿದ್ಯಾರ್ಥಿಗಳ ಪ್ರೊಜೆಕ್ಟ್ ಪ್ರದರ್ಶನ ಕಾರ್ಯಕ್ರಮವನ್ನು ಮೇ.31 ರಂದು ಉದ್ಘಾಟಿಸಿ ಮಾತನಾಡಿದರು.  


‘ಸಾಮಾನ್ಯ ಜನರಿಗೆ ಉಪಯುಕ್ತವಾಗುವಂತಹ ಹಲವಾರು ಮಾದರಿಗಳು ಇಂದು ನಾವು ಈ ಪ್ರಾಜೆಕ್ಟ್ ಪ್ರದರ್ಶನದಲ್ಲಿ ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಇಂದು ವಿವಿಧ ಬಗೆಯ ಕೃಷಿಕೆಲಸಗಳನ್ನು ಕೈಗೊಳ್ಳಲು ಹಲವಾರು ರೀತಿಯ ಯಂತ್ರಗಳ ಅಗತ್ಯತೆ ಇರುವ ಸಂದರ್ಭದಲ್ಲಿ ಇಂತಹ ಪ್ರಯೋಗಗಳು ಹಲವರಿಗೆ ಪ್ರಯೋಜನಕಾರಿಯಾಗುವ ಸಾಧ್ಯತೆಗಳಿವೆ’ ಎಂದು ಅವರು ಹೇಳಿದರು.


ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಳೂಣ್ಕರ್ ಅವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ‘ಪ್ರಾಜೆಕ್ಟ್ ಪ್ರದರ್ಶನಗಳು ಕೇವಲ ಅಂಕಗಳಿಗೆ ಸೀಮಿತವಾಗಿ ನಡೆಯಬಾರದು. ಈ ಕಾರ್ಯಕ್ರಮದಲ್ಲಿ ಪ್ರದರ್ಶನಗೊಂಡಿರುವ ಬಹುತೇಕ ಪ್ರಾಜೆಕ್ಟ್‍ಗಳು ಜನೋಪಯೋಗಿ ವಸ್ತುಗಳಾಗಿ ಪರಿವರ್ತಿತಗೊಂಡು ಮಾರುಕಟ್ಟೆಯಲ್ಲಿ ದೊರೆಯುವಂತಾಗಬೇಕು’ ಎಂದು ಶುಭಹಾರೈಸಿದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

ಇದೇ ಸಂದರ್ಭದಲ್ಲಿ ಎಕ್ಸ್‍ಪ್ರೋ ಆಬ್ಸ್ಟ್ರಾಕ್ಟ್ ವಾಲ್ಯೂಮ್-20 ನ್ನು ಬಿಡುಗಡೆಗೊಳಿಸಲಾಯಿತು. ವೇದಿಕೆಯಲ್ಲಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಂಶುಪಾಲ ಡಾ.ಐ. ಆರ್ ಮಿತ್ತಂತಾಯ, ಡಾ.ಶ್ರೀನಿವಾಸ ರಾವ್ ಬಿ ಆರ್ ಉಪಸ್ಥಿತರಿದ್ದರು.


ಎಕ್ಸ್‍ಪ್ರೋ ಸಂಯೋಜಕ ಮೆಕ್ಯಾನಿಕಲ್ ವಿಭಾಗದ ಪ್ರಾಧ್ಯಾಪಕ ಡಾ. ಮಲ್ಲಿಕಪ್ಪಾ ಸ್ವಾಗತಿಸಿದರು. ಕಂಪ್ಯೂಟರ್‍ಸೈನ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ರಾಜು ವಂದಿಸಿದರು. ಬಯೋಟೆಕ್ನಾಲಜಿ ವಿಭಾಗದ ಸಹಪ್ರಾಧ್ಯಾಪಕಿ ಡಾ.ಸ್ನೇಹಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು.


web counter

0 Comments

Post a Comment

Post a Comment (0)

Previous Post Next Post