ರಾಷ್ಟ್ರಮಟ್ಟದ ಸೀನಿಯರ್ ಥ್ರೋಬಾಲ್ ಪಂದ್ಯಾಟ: ಕರ್ನಾಟಕವನ್ನು ಪ್ರತಿನಿಧಿಸಲಿರುವ ಪುತ್ತೂರಿನ ಅನುಶ್ರೀ, ಆಶಿಕ

Chandrashekhara Kulamarva
0

ಪುತ್ತೂರು: ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿನಿಯರಾದ ಅನುಶ್ರೀ ಹಾಗೂ ಆಶಿಕ ಜೂನ್ 24 ರಿಂದ 27 ತಾರೀಖಿನ ವರೆಗೆ ರಾಜಸ್ಥಾನದ ಅಜ್ಮೇರ್ (ಪುಷ್ಕರ್) ನಲ್ಲಿ ನಡೆಯಲಿರುವ 45ನೇ ರಾಷ್ಟ್ರಮಟ್ಟದ ಸೀನಿಯರ್ ಥ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ತಂಡಕ್ಕೆ‌ ಆಯ್ಕೆಯಾಗಿದ್ದಾರೆ.


ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿಕುಮಾರಿ, ಯತೀಶ್ ಕುಮಾರ್ ತರಬೇತಿಯನ್ನು ನೀಡಿದ್ದಾರೆ ಆಯ್ಕೆಯಾದ ವಿಜೇತರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ವರ್ಗದವರು ಅಭಿನಂದಿಸಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top