ಪುತ್ತೂರು: ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಏರ್ಪಡಿಸಿದ ರಾಷ್ಟ್ರೀಯ ಮಟ್ಟದ ಕಾಮರ್ಸ್ ಫೆಸ್ಟ್-2022 ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ಸ್ಪರ್ಧೆಯಲ್ಲಿ ಅಂತಿಮ ಪದವಿಯ ಹತ್ತೊಂಬತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪೂರ್ವ ಚಟುವಟಿಕೆಯಾಗಿ ವಿಡಿಯೋ ತಯಾರಿ ಮತ್ತು ಲೈಕ್ಸ್ ಇನ್ ಇನ್ಸ್ಟಾಗ್ರಾಂ ಎಂಬ ಸ್ಪರ್ಧೆಯಲ್ಲಿ, ಉತ್ತಮ ವಿಡಿಯೋ ಮತ್ತು ಅತ್ಯಧಿಕ ಲೈಕ್ಸ್ ಪಡೆದ ವಿಡಿಯೋ ಎಂಬ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದಲ್ಲದೆ ಮಾರ್ಕೆಟಿಂಗ್ ವಿಭಾಗದಲ್ಲಿ ಪ್ರಥಮ, ಜನಪದ ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡಿರುತ್ತಾರೆ.
ಸ್ಪರ್ಧೆಯಲ್ಲಿ ಸುಮಾರು 25 ಕಾಲೇಜುಗಳು ಭಾಗವಹಿಸಿದೆ. ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ, ಸಮಗ್ರ ಪ್ರಶಸ್ತಿಯನ್ನು ತಂದುಕೊಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪ್ರಾಧ್ಯಾಪಕ ಮತ್ತು ಅಧ್ಯಾಪಕೇತರರ ವರ್ಗ ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ