ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ- 2020 ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿರುವುದು ಶಿಕ್ಷಣ ಪದ್ಧತಿ ಬೆಳೆಯಲು ಮತ್ತು ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕ, ಎಂದು ಮಂಗಳೂರಿನ ರೋಶನಿ ನಿಲಯ ಸ್ಕೂಲ್ ಆಫ್ ಸೋಷಿಯಲ್ ವರ್ಕ್ನ ನಿವೃತ್ತ ಪ್ರಾಧ್ಯಾಪಿಕೆ ಡಾ. ಮಾಲಿನಿ ಮುಕುಂದ್ ಅಭಿಪ್ರಾಯಪಟ್ಟರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ಮಂಗಳೂರು ಸಮಾಜಶಾಸ್ತ್ರ ಸಂಘ ಹಾಗೂ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಜಂಟಿ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸಮಾಜಶಾಸ್ತ್ರ ಎರಡನೇ ಸೆಮಿಸ್ಠರ್ (ಎನ್ಇಪಿ) ಪಠ್ಯದ ಕುರಿತಾದ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿದ ಅವರು, ಈಗ ಎನ್ಇಪಿಗೆ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಚೆನ್ನಾಗಿ ಹೊಂದಿಕೊಂಡಿದ್ದಾರೆ, ಎಂದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಪ್ರಾಂಶುಪಾಲ (ಉಸ್ತುವಾರಿ) ಡಾ. ಹರೀಶ್ ಎ, ವಿಷಯಗಳನ್ನು ಸಮಗ್ರವಾಗಿ ಅಧ್ಯಯನ ಮಾಡಲು ರಾಷ್ಟೀಯ ಶಿಕ್ಷಣ ನೀತಿ ವಿದ್ಯಾರ್ಥಿಗಳಿಗೆ ಸಹಕಾರಿ, ಎಂದರು. ಬ್ರಹ್ಮಾವರದ ಎಸ್ ಎಂ ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ವೈ ರವೀಂದ್ರನಾಥ ರಾವ್, ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೊತ್ತರ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವಿನಯ್ ರಜತ್ ಡಿ, ಕೋಟದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಿಕೆ ಡಾ. ಸುನೀತಾ ವಿ ಮತ್ತು ಅಜ್ಜರಕಾಡು ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಜೇಂದ್ರ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಎಂಎಸ್ಎ ಅಧ್ಯಕ್ಷ ಪ್ರೊ.ಯೋಗೀಂದ್ರ ಬಿ ಸ್ವಾಗತಿಸಿ, ವಿವಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಗಾಯತ್ರಿ ಎನ್ ವಂದಿಸಿದರು. ಪುಂಜಾಲಕಟ್ಟೆ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಿಕೆ ಡಾ. ವೈಶಾಲಿ ಕಾರ್ಯಕ್ರಮ ನಿರೂಪಿಸಿದರು.