ಪಿಯುಸಿ: ನಿಟ್ಟೆ ಪದವಿಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ

Upayuktha
0



ನಿಟ್ಟೆ: ಕಾರ್ಕಳದ ನಿಟ್ಟೆಯಲ್ಲಿರುವ ಡಾ.ಎನ್.ಎಸ್.ಎ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸ್ಮಿಶಾ ಕುಟಿನ್ಹೊ 589 ಅಂಕ ಗಳಿಸಿ ರಾಜ್ಯಕ್ಕೆ 10 ನೇ ರ‍್ಯಾಂಕ್‌ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿನಿ ಶ್ರೇಷ್ಠಾ 584 ಅಂಕ ಪಡೆದು ಕಾಲೇಜಿನ ವಾಣಿಜ್ಯ ವಿಭಾಗದ ಟಾಪರ್ ಆಗಿರುವರು.


ವಿಜ್ಞಾನ ವಿಭಾಗದಲ್ಲಿ ಒಟ್ಟು 83 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 80 ಮಂದಿ ತೇರ್ಗಡೆ ಹೊಂದಿರುತ್ತಾರೆ. ಅವರಲ್ಲಿ 41 ಮಂದಿ ವಿಶಿಷ್ಟ ಶ್ರೇಣಿಯನ್ನು ಪಡೆದಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 120 ಮಂದಿ ಪರೀಕ್ಷೆ ಬರೆದಿದ್ದು 113 ಮಂದಿ ತೇರ್ಗಡೆ ಹೊಂದಿರುತ್ತಾರೆ. ಅವರಲ್ಲಿ 35 ಮಂದಿ ವಿಶಿಷ್ಟ ಶ್ರೇಣಿಯನ್ನು ಪಡೆದು ಸಾಧನೆಗೈದಿರುವರು.


ಡಾ.ಎನ್.ಎಸ್.ಎ.ಎಂ ಪ.ಪೂ ಕಾಲೇಜಿನ ದ್ವಿತೀಯ ಪಿ.ಯು.ಸಿ ಯ ಒಟ್ಟು ಫಲಿತಾಂಶ 95% ಆಗಿದ್ದು 76 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವರು ಎಂದು ಕಾಲೇಜಿನ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top