||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪಿಯುಸಿ ಫಲಿತಾಂಶ: ರಾಜ್ಯ ಮಟ್ಟದಲ್ಲಿ ಮಿಂಚಿದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು

ಪಿಯುಸಿ ಫಲಿತಾಂಶ: ರಾಜ್ಯ ಮಟ್ಟದಲ್ಲಿ ಮಿಂಚಿದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು

 ವಾಣಿಜ್ಯ ವಿಭಾಗದ ದೀಪ್ನಾ ಜೆ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ 

 ವಿಜ್ಞಾನ ವಿಭಾಗದ ಮನ್ವಿತ ಎನ್ ಪಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಐದನೇ ರ‍್ಯಾಂಕ್

 ಕಲಾ ವಿಭಾಗದ ವಸುದೇವ ತಿಲಕ್ ತಾಲೂಕಿಗೆ ಪ್ರಥಮ ಪುತ್ತೂರು: 2021-22ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಶೇ 96 ಫಲಿತಾಂಶವನ್ನು ಪಡೆದಿದೆ. 


ವಾಣಿಜ್ಯ ವಿಭಾಗದಲ್ಲಿ ದೀಪ್ನಾ ಜೆ 593 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯದಲ್ಲಿ ನಾಲ್ಕನೇ ರ‍್ಯಾಂಕ್ ಮತ್ತು ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇವರು ಅರ್ಥಶಾಸ್ತ್ರ 100, ವ್ಯವಹಾರ ಅಧ್ಯಯನ 99, ಲೆಕ್ಕಶಾಸ್ತ್ರ 100, ಸಂಖ್ಯಾಶಾಸ್ತ್ರ 100, ಇಂಗ್ಲೀಷ್ 95 ಮತ್ತು ಸಂಸ್ಕೃತದಲ್ಲಿ 99 ಅಂಕಗಳನ್ನು ಗಳಿಸಿರುತ್ತಾರೆ. ಈಕೆ ಕಾಸರಗೋಡಿನ ಮುಂಡಿತ್ತಡ್ಕದ  ಎಸ್. ನಾರಾಯಣ ಮತ್ತು ಪುಷ್ಪ ಕೆ ದಂಪತಿ ಪುತ್ರಿ. 


ವಿಜ್ಞಾನ ವಿಭಾಗದಲ್ಲಿ 594 ಅಂಕಗಳನ್ನು ಗಳಿಸುವುದರ ಮೂಲಕ ಮನ್ವಿತ ಎನ್ ಪಿ ರಾಜ್ಯದಲ್ಲಿ ಐದನೇ ರ‍್ಯಾಂಕ್ ಮತ್ತು ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇವರು ಭೌತಶಾಸ್ತ್ರ 100, ರಸಾಯನಶಾಸ್ತ್ರ 100, ಗಣಿತ100, ಜೀವಶಾಸ್ತ್ರ 100, ಸಂಸ್ಕೃತ 100 ಮತ್ತು ಇಂಗ್ಲಿಷ್ 94 ಅಂಕಗಳನ್ನು ಪಡೆಯುವುದರ ಮೂಲಕ ಒಟ್ಟು 594 ಅಂಕಗಳನ್ನು ಗಳಿಸಿ ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ. ಈಕೆ ಕಾಸರಗೋಡಿನ ನೀರ್ಚಾಲಿನ ಪುರುಷೋತ್ತಮ ಶರ್ಮ ಮತ್ತು ಸುಮಾ ದಂಪತಿ ಪುತ್ರಿ.  


ಕಲಾ ವಿಭಾಗದಲ್ಲಿ 580 ಅಂಕಗಳನ್ನು ಪಡೆಯುವುದರ ಮೂಲಕ ವಸುದೇವ ತಿಲಕ್ ತಾಲೂಕಿನಲ್ಲಿ  ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಈತನು ಕನ್ನಡ 95, ಇಂಗ್ಲೀಷ್ 90, ಇತಿಹಾಸ 99, ಅರ್ಥಶಾಸ್ತ್ರ 100, ಸಮಾಜಶಾಸ್ತ್ರ 96 ಮತ್ತು ರಾಜ್ಯಶಾಸ್ತ್ರ ದಲ್ಲಿ 100 ಅಂಕಗಳನ್ನು ಗಳಿಸಿದ್ದಾರೆ. ಈತನು ಉಡುಪಿಯ ಹೆಬ್ರಿಯ ಸಹದೇವ ಶೆಟ್ಟಿ ಮತ್ತು ವಸಂತ ಶೆಟ್ಟಿ ದಂಪತಿ ಪುತ್ರ.


ವಿಜ್ಞಾನ ವಿಭಾಗದಲ್ಲಿ ಮೂವರು ವಿದ್ಯಾರ್ಥಿಗಳು 589 ಅಂಕಗಳನ್ನು ಪಡೆದು ರಾಜ್ಯದಲ್ಲಿ ಹತ್ತನೇ ರ‍್ಯಾಂಕ್ ಮತ್ತು ಕಾಲೇಜಿನಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಸ್ತುತಿ ಎಂ. ಎಸ್(ಪುತ್ತೂರಿನ ನೆಹರೂನಗರದ ಶ್ರೀಕೃಷ್ಣ ಗಣರಾಜ್ ಭಟ್ ಮತ್ತು ಸೌಮ್ಯ ಎಂ ದಂಪತಿ ಪುತ್ರಿ), ಪ್ರಾಪ್ತಿ ಗಂಭೀರ್(ಪುತ್ತೂರಿನ ಕೈಕಾರದ ವಿರೇಂದ್ರ ಎನ್ ಗಂಭೀರ್ ಮತ್ತು ಸೌಮ್ಯ ದಂಪತಿ ಪುತ್ರಿ) ಮತ್ತು ಎಂ. ವಿಶಾಖ್ ಕಾಮತ್(ಪುತ್ತೂರಿನ ಬೊಳುವಾರಿನ ಎಂ. ವಿದ್ಯಾಧರ್ ಕಾಮತ್ ಮತ್ತು ಎಂ. ಮುಕ್ತ ಕಾಮತ್ ದಂಪತಿ ಪುತ್ರ) ಇವರು ರಾಜ್ಯದಲ್ಲಿ ಹತ್ತನೇ ರ‍್ಯಾಂಕ್ ಪಡೆದಿದ್ದಾರೆ. 


ವಾಣಿಜ್ಯ ವಿಭಾಗದಲ್ಲಿ 588 ಅಂಕಗಳನ್ನು ಪಡೆಯುವುದರ ಮೂಲಕ ಚೈತ್ರಾ ಎನ್ ರಾಜ್ಯದಲ್ಲಿ ಒಂಭತ್ತನೇ ರ‍್ಯಾಂಕ್ ಮತ್ತು ಕಾಲೇಜಿನಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ಈಕೆ ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯದ ಚಂದ್ರ ಮತ್ತು ಶಶಿಕಲಾ ದಂಪತಿಗಳ ಪುತ್ರಿ.


ಕಲಾ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು 579 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ದಿಶಾ ಎಂ(ಉರಿಮಜಲಿನ ವಿಶ್ವನಾಥ ಎಂ ಮತ್ತು ವಿದ್ಯಾ ಕೆ ದಂಪತಿ ಪುತ್ರಿ) ಮತ್ತು ವರ್ಷಾ ಎ (ಶಿವಮೊಗ್ಗದ ಭದ್ರಾವತಿಯ ಆನಂದ ರಾಜ್ ಆರ್ ಮತ್ತು ದೀಪಾಲಕ್ಮೀ ಕೆ ದಂಪತಿ ಪುತ್ರಿ) ಕಾಲೇಜಿಗೆ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. 


ವಿಜ್ಞಾನ ವಿಭಾಗದ ಒಟ್ಟು 335 ಮಂದಿ ವಿದ್ಯಾರ್ಥಿಗಳಲ್ಲಿ 140 ಮಂದಿ ಡಿಸ್ಟಿಂಕ್ಷನ್, 164 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಶೇ 93.73 ಫಲಿತಾಂಶ, ವಾಣಿಜ್ಯ ವಿಭಾಗದ ಒಟ್ಟು 264 ವಿದ್ಯಾರ್ಥಿಗಳಲ್ಲಿ 91 ಮಂದಿ ಡಿಸ್ಟಿಂಕ್ಷನ್ ಹಾಗೂ 124 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಶೇ 93.56 ಫಲಿತಾಂಶ,  ಕಲಾ ವಿಭಾಗದ ಒಟ್ಟು 46 ವಿದ್ಯಾರ್ಥಿಗಳಲ್ಲಿ 20 ಮಂದಿ ಡಿಸ್ಟಿಂಕ್ಷನ್, 19 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಶೇ 100 ಫಲಿತಾಂಶ ಪಡೆದಿದ್ದಾರೆ.  ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಕೃಷ್ಣಪ್ರಸಾದ್ ನಡ್ಸಾರ್, ಪ್ರಾಂಶುಪಾಲ ಮಹೇಶ ನಿಟಿಲಾಪುರ, ಶಿಕ್ಷಕ-ರಕ್ಷಕ ಸಂಘ ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಸಂತಸ ವ್ಯಕ್ತಪಡಿಸಿದ್ದಾರೆ.


ಕಾಲೇಜಿನ ವಸತಿ ನಿಲಯದಲ್ಲಿ ಇದ್ದುಕೊಂಡು ಅಧ್ಯಯನ ಮಾಡಿರುವ ಕಾರಣ ವಿಪುಲವಾದ ಸಮಯಾವಕಾಶ ದೊರಕಿತು. ಹೆತ್ತವರ ಮತ್ತು ಉಪನ್ಯಾಸಕರ ನಿರಂತರವಾದ ಉತ್ಸಾಹಭರಿತ ಮಾರ್ಗದರ್ಶನದಿಂದ ಉತ್ತಮ ಅಂಕಗಳನ್ನು ಗಳಿಸಲು ಸಾಧ್ಯವಾಯಿತು. ಕಾಲೇಜಿನಲ್ಲಿ ಶಿಕ್ಷಣಕ್ಕೆ ಎಲ್ಲಾ ರೀತಿಯ ಸಹಕಾರ ಮತ್ತು ಪ್ರೋತ್ಸಾಹ ಸದಾ ಸಿಗುತ್ತಿತ್ತು. ದೈನಂದಿನ ಪಾಠವನ್ನು ಅಂದಂದೇ ಮನನ ಮಾಡಿದ ಕಾರಣ ಹಾಗೂ ಹೆತ್ತವರಿಂದ ಕಲಿಕೆಗಾಗಿ ದೊರೆತ ಹುರಿದುಂಬಿಸುವ ಮಾತು ಹಾಗೂ ಸಮಯಪ್ರಜ್ಞೆಯಿಂದ ಈ ಸಾಧನೆಗೈಯ್ಯಲು ಸಾಧ್ಯವಾಯಿತು.

-ಮನ್ವಿತ ಎನ್ ಪಿ

ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


 

web counter

0 Comments

Post a Comment

Post a Comment (0)

Previous Post Next Post