ಪೆರ್ಲ: 12ರಂದು ನಾಲಂದ ಮಹಾವಿದ್ಯಾಲಯದ ನೂತನ ಕಟ್ಟಡ ಮತ್ತು ಸ್ಮಾರ್ಟ್ ಕ್ಲಾಸ್ ರೂಮ್‌ಗಳ ಉದ್ಘಾಟನೆ

Upayuktha
0


ಪೆರ್ಲ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ನಿರ್ಮಿಸಿದ ನಾಲಂದ ಮಹಾವಿದ್ಯಾಲಯದ ನೂತನ ಕಟ್ಟಡ ಮತ್ತು ನಿಟ್ಟೆ ವಿಶ್ವವಿದ್ಯಾಲಯ (ಪರಿಗಣಿಸಲ್ಪಟ್ಟ) ಪ್ರಾಯೋಜಿತ ಸ್ಮಾರ್ಟ್ ಕ್ಲಾಸ್ ರೂಮ್‌ಗಳ ಉದ್ಘಾಟನ ಸಮಾರಂಭ ಜೂನ್ 12ರಂದು ಸಂಜೆ 3ಕ್ಕೆ ಪೆರ್ಲ ನಾಲಂದ ಮಹಾವಿದ್ಯಾಲಯದ ನೂತನ ಕಟ್ಟಡದಲ್ಲಿ ನಡೆಯಲಿದೆ.


ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಸಿ.ಸೋಮಶೇಖರ ಐಎಎಸ್ (ನಿವೃತ್ತ) ಅಧ್ಯಕ್ಷತೆ ವಹಿಸುವರು‌. ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಕಾರ್ಕಳ, ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ವಿನಯ ಹೆಗ್ಡೆ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.


ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ, ನಾಲಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಆನೆಮಜಲು ವಿಷ್ಣು ಭಟ್ ಶುಭ ಹಾರೈಸುವರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಮ್.ಕೃಷ್ಣ ಭಟ್, ನಾಲಂದ ಮಹಾವಿದ್ಯಾಲಯದ ಆಡಳಿತ ಕಾರ್ಯದರ್ಶಿ ಡಾ. ಜಯಗೋವಿಂದ ಉಕ್ಕಿನಡ್ಕ, ಪ್ರಾಂಶುಪಾಲ ಡಾ. ಕಿಶೋರ್ ಕುಮಾರ್ ಶೇಣಿ, ಆಡಳಿತ ಮಂಡಳಿ ಸದಸ್ಯರು, ಪ್ರಾಧ್ಯಾಪಕರು ಉಪಸ್ಥಿತರಿರುವರು‌.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top