'ನಾರಾಯಣಗುರುಗಳ ಶೈಕ್ಷಣಿಕ ಚಿಂತನೆ': ಜುಲೈ 5ರಂದು ವಿಶೇಷ ಉಪನ್ಯಾಸ

Upayuktha
0

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ಸಂಯೋಜನೆಯಲ್ಲಿ ಭಾರತದ ಸಂತ ತತ್ವ 2022ರ ಸರಣಿ ಉಪನ್ಯಾಸ-3 ಜುಲೈ 5ರಂದು ಸುರತ್ಕಲ್‌ನ ಗೋವಿಂದ ದಾಸ ಕಾಲೇಜಿನ ಸಭಾಂಗಣದಲ್ಲಿ ಅಪರಾಹ್ನ 1:30ರಿಂದ ನಡೆಯಲಿದೆ.


ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಕೃಷ್ಣಮೂರ್ತಿ ಅವರು ಅಧ್ಯಕ್ಷತೆ ವಹಿಸಲಿದ್ದು, ವಿಶ್ವವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸದಸ್ಯ ದಿನಕರ್ ಉಳ್ಳಾಲ್‌ ಅವರು 'ನಾರಾಯಣಗುರುಗಳ ಶೈಕ್ಷಣಿಕ ಚಿಂತನೆ' ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.


ಸಮಾರಂಭದಲ್ಲಿ ಪೀಠದ ಸದಸ್ಯರು, ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ನಾರಾಯಣ ಗುರು ಅಧ್ಯಯನ ಪೀಠದ ಸಂಯೋಜಕರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಹಾಗೂ ಕುಲಸಚಿವರಾದ ಡಾ. ಕಿಶೋರ್ ಕುಮಾರ್ ಸಿಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top