ಪುತ್ತೂರು: ನಮ್ಮ ದೈನಂದಿನ ಚಟವಟಿಕೆಗಳಿಂದ ಉಂಟಾಗುವ ಕಸಗಳ ಸರಿಯಾದ ವಿಂಡಗಣೆಯಾದರೆ ಅದನ್ನೇ ಸಂಪನ್ಮೂಲವಾಗಿ ಬಳಸಬಹುದು. ನಾವು ದಿನನಿತ್ಯ ಉಪಯೋಗಿಸುವ ಪ್ಲಾಸ್ಟಿಕ್ ಗಳಿಂದ ಹಿಡಿದು ಪೇಪರ್, ಬಟ್ಟೆ, ಎಲೆಕ್ಟ್ರಾನಿಕ್ ವಸ್ತು, ಲೋಹಗಳನ್ನು ಸಾಧ್ಯವಾದಷ್ಟು ಮರುಬಳಕೆ ಮಾಡಬೇಕು ಎಂದು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಡಾ. ರಾಜೇಶ್ ಬೆಜ್ಜಂಗಳ ಮಾತನಾಡಿದರು.
ಅವರು ಕಾಲೇಜಿನ ಐಕ್ಯೂಎಸಿ ಹಾಗೂ ನೇಚರ್ ಕ್ಲಬ್ ಆಶ್ರಯದಲ್ಲಿ ನಡೆದ ತ್ಯಾಜ್ಯ ನಿರ್ವಹಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ತ್ಯಾಜ್ಯ ನಿರ್ವಹಣೆಯ ಅಗತ್ಯತೆ ಮತ್ತು ಹಸಿಕಸ ಒಣಕಸವನ್ನು ವಿಭಜಿಸಿ ಅದರಿಂದ ಆಗುವ ಪರಿಣಾಮದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಮಾತನಾಡಿ ಪ್ರತಿನಿತ್ಯ ಮನೆಗಳಲ್ಲಿ ಕಸಗಳ ನಿರ್ವಹಣೆಯನ್ನು ಮಾಡಬೇಕು. ಇಲ್ಲವಾದಲ್ಲಿ ಅದರಿಂದಾಗಿ ಇಡೀ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂದು ಹೇಳಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಈ ಸಂದರ್ಭದಲ್ಲಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಕೃಷ್ಣ ಗಣರಾಜ ಭಟ್ ಮತ್ತು ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಈಶ್ವರ್ ಪ್ರಸಾದ್ ಉಪಸ್ಥಿತರಿದ್ದರು.
ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಅಪೇಕ್ಷ ಪ್ರಾರ್ಥಿಸಿದರು. ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಈಶ್ವರ್ ಪ್ರಸಾದ್ ಸ್ವಾಗತಿಸಿ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ವಂದಿಸಿ, ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಸುಶ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.