ʼಇಂಗ್ಲಿಷ್ ಕಬ್ಬಿಣದ ಕಡಲೆಯಲ್ಲʼ

Upayuktha
0

ʼಸ್ಪೂರ್ತಿ ನಡೆ 2022ʼ ಸ್ಪೋಕನ್ ಇಂಗ್ಲಿಷ್ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮಹಾಲಕ್ಷ್ಮಿ ಬೋಳಾರ್



ಮಂಗಳೂರು: ಕನ್ನಡವು ನಮ್ಮ ಉಸಿರಾಗಿರಲಿ. ಆದರೆ ಪ್ರಪಂಚದೊಂದಿಗೆ ವ್ಯವಹರಿಸಲು ಇಂಗ್ಲಿಷ್ ಅತ್ಯವಶ್ಯಕ ಭಾಷೆಯಾಗಿದೆ. ಮನಸ್ಸು ಮಾಡಿದರೆ ಇಂಗ್ಲಿಷ್ ಅನ್ನು ಯಾರೂ ಕಲಿಯಬಹುದು, ಎಂದು ಮಂಗಳೂರಿನ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಹಾಲಕ್ಷ್ಮಿ ಬೋಳಾರ್ ತಿಳಿಸಿದರು.


ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು ಇವರ ಸಹಯೋಗದೊಂದಿಗೆ ಇತ್ತೀಚೆಗೆ ಶ್ರೀ ಡಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಅಶೋಕನಗರದಲ್ಲಿ ಹಮ್ಮಿಕೊಂಡಿದ್ದ ʼಸ್ಪೂರ್ತಿ ನಡೆ 2022ʼ ಸ್ಪೋಕನ್ ಇಂಗ್ಲಿಷ್ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿವಿಧ ಕ್ಷೇತ್ರಗಳಲ್ಲಿ ಇರುವ ಅವಕಾಶಗಳನ್ನು ಬಾಚಿಕೊಳ್ಳಬೇಕಾದರೆ ಇಂಗ್ಲಿಷ್ ಅವಶ್ಯ, ಎಂದು ಅಭಿಪ್ರಾಯಪಟ್ಟರು.


ಮುಖ್ಯ ಅತಿಥಿಯಾಗಿದ್ದ ಎಸ್. ಡಿ.ಎಂ ನಿರ್ವಹಣಾ ಅಭಿವೃದ್ಧಿ ಸಂಸ್ಥೆಯ ಸಹಾಯಕ ಪ್ರಾಧ್ಯಾಪಿಕೆ ಲೋಲಿಟಾ ನೀತಾ ಡಿಸೋಜಾ, ಇಂಗ್ಲಿಷ್ ಕಲಿಯುವುದರಿಂದ ಯಾರ ಹಂಗಿಲ್ಲದೆ ಪ್ರಪಂಚದ ಮೂಲೆ ಮೂಲೆ ಸುತ್ತಬಹುದು, ಎಂದರು.


ಕಾರ್ಯಕ್ರಮದಲ್ಲಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಜಲಜಾಕ್ಷಿ, ನಿಲಯ ಮೇಲ್ವಿಚಾರಕ ಹೇಮಂತ್ ಕುಮಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಂಕರ್ ಓಬಳಬಂಡಿ ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆ ಸಲ್ಲಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top