ಪುತ್ತೂರು: ಭಾರತದಂತಹ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಉತ್ತಮ ಆಡಳಿತಗಾರರು ಇರಲೇಬೇಕು. ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳಿಂದ ದೇಶ ಭಕ್ತಿಯನ್ನು ಒಳಗೊಂಡಂತಹ ಉತ್ತಮ ಆಡಳಿತಗಾರರು, ರಾಜಕಾರಣಿಗಳು ಮೂಡಿಬರಬೇಕು. ಇದನ್ನು ತರಬೇತುಗೊಳಿಸುವ ನಿಟ್ಟಿನಲ್ಲಿ ಪ್ರತಿವರ್ಷವೂ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ನಾಯಕನನ್ನು ಆಯ್ಕೆ ಮಾಡಗಾಗುತ್ತಿದ್ದು ನಮ್ಮ ನಾಯಕರು ನೆರೆ ಮುಂತಾದ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಜನರಿಗೆ ಸಹಾಯ, ಗಿಡ ನೆಡುವ ಕಾರ್ಯಕ್ರಮ, ಸ್ವಚ್ಛತಾ ಕಾರ್ಯಕ್ರಮ ಮುಂತಾದ ಉತ್ತಮ ಕೆಲಸಗಳನ್ನು ಒಗ್ಗೂಡಿ ಮಾಡುತ್ತಾರೆ. ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಸ್ಪರ್ಧಿಗಳಿಗೂ ಶುಭ ಹಾರೈಕೆಗಳು. ಅತ್ಯುತ್ತಮ ವಿದ್ಯಾರ್ಥಿ ಸಂಘ ಮೂಡಿ ಬರಲಿ ಎಂದು ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಯ ಮಾನ್ಯ ಸಂಚಾಲಕರಾದ ಸುಬ್ರಹ್ಮಣ್ಯ ನಟ್ಟೋಜ ಸ್ಪರ್ಧಿಗಳಿಗೆ ಶುಭ ಹಾರೈಸಿದರು.
ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಯ ಅಂಗ ಸಂಸ್ಥೆ ಅಂಬಿಕಾ ವಿದ್ಯಾಲಯ ನೆಲ್ಲಿಕಟ್ಟೆ ಇಲ್ಲಿಯ ವಿದ್ಯಾರ್ಥಿ ಸಂಘದ ಚುನಾವಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು.
ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ, ಚುನಾವಣಾಧಿಕಾರಿಗಳಾದ ಗಣಕಶಾಸ್ತ್ರ ಉಪನ್ಯಾಸಕ ಪ್ರದೀಪ್ ಕೆ ವೈ ಹಾಗೂ ಗಣಿತಶಾಸ್ತ್ರ ಉಪನ್ಯಾಸಕಿ ಶೈನಿ ಕೆ ಜೆ ಉಪಸ್ಥಿತರಿದ್ದರು. ಹಾಗೂ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ಉಪನ್ಯಾಸಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ನಂತರ ವಿದ್ಯಾರ್ಥಿಗಳು ಮತದಾನ ಮಾಡಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯಿತು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ