ತೆಂಕನಿಡಿಯೂರು: 127 ಯೂನಿಟ್‍ಗಳ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Upayuktha
0

ಉಡುಪಿ: ಯುವ ರೆಡ್‍ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರಕ್ತನಿಧಿ ಜಿಲ್ಲಾ ಆಸ್ಪತ್ರೆ, ಉಡುಪಿ ಹಾಗೂ ಲಯನ್ಸ್ ಕ್ಲಬ್ ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಸೇರಿ 127 ಯೂನಿಟ್ ರಕ್ತದಾನ ಮಾಡಿದರು. ಲಯನ್ಸ್ ಕ್ಲಬ್ ಉಡುಪಿ ಇದರ ಕಾರ್ಯದರ್ಶಿ ಶ್ರೀ ವಿಠಲದಾಸ್ ಪಾಟೀಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.


ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ವಿಭಾಗದ ಮುಖ್ಯಸ್ಥರಾದ ಡಾ. ವೀಣಾ ರಕ್ತದಾನದ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ. ಮಾತನಾಡಿ, “ರಕ್ತಕ್ಕೆ ಪರ್ಯಾಯ ಇಲ್ಲ.  ಅಗತ್ಯ ಸಂದರ್ಭಗಳಲ್ಲಿ ರಕ್ತದಾನ ಮಾಡುವ ಮೂಲಕ ಜೀವದಾನ ಮಾಡಿದ ಪುಣ್ಯವನ್ನು ವಿದ್ಯಾರ್ಥಿಗಳು ಗಳಿಸುತ್ತಾರೆ” ಎಂದರು.


ಯುವ ರೆಡ್‍ಕ್ರಾಸ್ ಘಟಕದ ಸಂಚಾಲಕ ಡಾ. ಉದಯ ಶೆಟ್ಟಿ ಕೆ. ಪ್ರಸ್ತಾವಿಕವಾಗಿ ಮಾತನಾಡಿದರು.  ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಮೇವಿ ಮಿರಾಂದ, ರಾ.ಸೇ. ಯೋಜನಾಧಿಕಾರಿಗಳಾದ ಡಾ. ಮಹೇಶ್ ಕುಮಾರ್ ಕೆ.ಇ. ಹಾಗೂ ಶ್ರೀಮತಿ ಸುಷ್ಮಾ ಟಿ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕು. ಕಾವ್ಯ ಎಂ. ನಿರೂಪಿಸಿದರು.

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top