||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ನಿರೀಕ್ಷೆ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ನಿರೀಕ್ಷೆ


ಮಂಗಳೂರು: ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 40-50 ಕಿ.ಮೀ ವೇಗದ ಗಾಳಿ ಬೀಸಲಿದ್ದು ಸಮುದ್ರದಲ್ಲಿ ಭಾರೀ ಅಲೆಗಳು ಏಳುವ ಸೂಚನೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಇಂದು ರಾತ್ರಿ 11:30ರ ವರೆಗಿನ ಅವಧಿಯಲ್ಲಿ 3.1ರಿಂದ 3.5 ಮೀಟರ್‌ಗಳ ವರೆಗೆ ಎತ್ತರದ ಅಲೆಗಳು ಏಳುವ ಸಾಧ್ಯತೆಯಿದೆ. ಮಂಗಳೂರಿನಿಂದ ಕಾರವಾರದ ವರೆಗೆ ಅಲೆಗಳ ಎತ್ತರ ಸೆಕೆಂಡಿಗೆ 30ರಿಂದ 60 ಸೆಂಟಿಮೀಟರ್‌ಗಳ ನಡುವೆ ಬದಲಾಗುತ್ತಿರುತ್ತದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ಜೂನ್‌ 30ರ ಬೆಳಗ್ಗೆ 8:30ರ ವರೆಗೆ ಸೂಚಿಸಲಾದ ಅವಧಿಯಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸೂಚನೆ ನೀಡಲಾಗಿದೆ. ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಅಲ್ಲಲ್ಲಿ 115.6 ಮಿಲಿಮೀಟರ್‌ನಿಂದ 204.4 ಮಿ.ಮೀ ವರೆಗೂ ಅತಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ.

ಎರಡನೆಯ ದಿನ- ಜುಲೈ 1ರ ಬೆಳಗ್ಗೆ 8:30ರ ವರೆಗಿನ ಅವಧಿಯಲ್ಲಿ-  ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಅಲ್ಲಲ್ಲಿ 115.6 ಮಿಲಿಮೀಟರ್‌ನಿಂದ 204.4 ಮಿ.ಮೀ ವರೆಗೂ ಮಿಂಚು ಗುಡುಗು ಸಹಿತ ಅತಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ.

ನಂತರದ ಮೂರು ದಿನಗಳ ಕಾಲ- ಅಂದರೆ ಜುಲೈ 2, 3 ಮತ್ತು 4ರಂದು ಬೆಳಗ್ಗೆ 8:30ರ ವರೆಗಿನ ಅವಧಿಯಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಅಲ್ಲಲ್ಲಿ 64.ಮಿ.ಮೀನಿಂದ 115.5 ಮಿ.ಮೀ ವರೆಗೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post