|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಜುಲೈ 1-2: ರಾಷ್ಟ್ರೀಯ ಶಿಕ್ಷಣ ನೀತಿ 2020- ಅವಕಾಶಗಳು ಮತ್ತು ಸವಾಲುಗಳು ಕುರಿತ ವಿಚಾರ ಸಂಕಿರಣ

ಜುಲೈ 1-2: ರಾಷ್ಟ್ರೀಯ ಶಿಕ್ಷಣ ನೀತಿ 2020- ಅವಕಾಶಗಳು ಮತ್ತು ಸವಾಲುಗಳು ಕುರಿತ ವಿಚಾರ ಸಂಕಿರಣ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ಜುಲೈ 1 ಮತ್ತು 2ರಂದು ರಾಷ್ಟ್ರೀಯ ಶಿಕ್ಷಣ ನೀತಿ- 2020ರ ಅವಕಾಶಗಳು ಮತ್ತು ಸವಾಲುಗಳು- ಈ ಕುರಿತು ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.


ಮಂಗಳೂರಿನ ಶಕ್ತಿನಗರದ ಶಕ್ತಿ ಪದವಿಪೂರ್ವ ಕಾಲೇಜಿನಲ್ಲಿ ಚಾಣಕ್ಯ ಯುನಿವರ್ಸಿಟಿ, ಶಕ್ತಿ ಪಿಯು ಕಾಲೇಜು ಮತ್ತು ವಿದ್ಯಾ ಭಾರತಿ ದಕ್ಷಿಣ ಕನ್ನಡದ ಸಹಯೋಗದಲ್ಲಿ ಜು.1ರಂದು ಬೆಳಗ್ಗೆ 10:00 ಗಂಟೆಗೆ ವಿಚಾರ ಸಂಕಿರಣದ ಉದ್ಘಾಟನೆ ನಡೆಯಲಿದೆ.


ಶಕ್ತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕೆ.ಸಿ ನಾಯಕ್ ಅವರು ಅಧ್ಯಕ್ಷತೆ ವಹಿಸಲಿದ್ದು, ಚಾಣಕ್ಯ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾದ ಡಾ. ಸಂದೀಪ್ ನಾಯರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ದ.ಕ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೆಶಕರಾದ ಸಿ.ಡಿ. ಜಯಣ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.


ದ.ಕ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಗಂಗಾಧರ ಆಳ್ವ ಕೆ.ಎಸ್‌ ಮತ್ತು ವಿದ್ಯಾಭಾರತಿ ಕರ್ನಾಟಕದ ರಾಜ್ಯ ಕಾರ್ಯದರ್ಶಿ ವಸಂತ ಮಾಧವ ಉಪಸ್ಥಿತರಿರುತ್ತಾರೆ.


ಪೂರ್ವಾಹ್ನ 11 ಗಂಟೆಗೆ ಚಾಣ್ಯ ವಿವಿ ಸ್ಥಾಪಕ ಕುಲಪತಿಗಳು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿಯ ಉಪಾಧ್ಯಕ್ಷರಾದ ಡಾ. ಎಂ.ಕೆ ಶ್ರೀಧರ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.


ಜುಲೈ 2ರಂದು ಬೆಳಗ್ಗೆ 11:15ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.


ಸಿಇಎಸ್‌ಎಸ್‌ ನಿರ್ದೇಶಕ ಡಾ. ಗೌರೀಶ್, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರಮೇಶ್ ಕೆ. ಉಪಸ್ಥಿತರಿರುತ್ತಾರೆ.


ವಿಚಾರ ಸಂಕಿರಣದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಗಿರೀಶ್, ಡಾ. ಸಂದೀಪ್ ನಾಯರ್‌, ಸಿಇಎಸ್‌ಎಸ್‌ ಶೈಕ್ಷಣಿಕ ವಿಭಾಗದ ಮುಖ್ಯಸ್ಥರಾದ ಡಾ. ಪದ್ಮಾವತಿ ಜಿ.ಎಸ್‌, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಡಾ. ಕರುಣಾಕರ, ಉಡುಪಿಯ ಶ್ರೀ ಮಧ್ವ ವಾದಿರಾಜ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ ಮತ್ತು ಮ್ಯಾನೇಜ್‌ಮೆಂಟ್‌ ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸಿ.ಕೆ ಮಂಜುನಾಥ ಅವರು ಪಾಲ್ಗೊಳ್ಳಲಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post