ಮಂಗಳೂರು: ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ 2021-22 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜೂನ್ 9 (ಗುರುವಾರ) ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದೆ.
ವಿವೇಕಾನಂದ ಶಿಕ್ಷಣ ವಾಹಿನಿಯ ಸಂಸ್ಥಾಪಕ ನಿತ್ಯಾನಂದ ವಿವೇಕ ವಂಶಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಲಿದ್ದಾರೆ. ʼಪದ್ಮಶ್ರೀʼ ಪ್ರಶಸ್ತಿ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಮುಖ್ಯ ಅತಿಥಿಯಾಗಿರಲಿದ್ದಾರೆ. ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ