ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Upayuktha
0

ಪುತ್ತೂರು: ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ಬಹಳ ಮುಖ್ಯವಾದುದು, ಶಿಕ್ಷಣ ವ್ಯವಸ್ಥೆಯು ಅಂಕಗಳನ್ನು ಗಳಿಸುವುದಕ್ಕೆ ಮಾತ್ರ ಮಹತ್ವ ನೀಡುತ್ತಿರುವ ಈ ಕಾಲಘಟ್ಟದಲ್ಲಿ ಮೌಲ್ಯಾಧಾರಿತ ಹಾಗೂ ಸಂಸ್ಕಾರಭರಿತ ಶಿಕ್ಷಣ ನೀಡುವ ವಿವೇಕಾನಂದ ವಿದ್ಯಾಸಂಸ್ಥೆಗಳ ಕಾರ್ಯ ನಿಜಕ್ಕೂ  ಶ್ಲಾಘನೀಯ ಎಂದು ಪುರೋಹಿತ ಕಾರ್ತಿಕ್ ಶಾಸ್ತ್ರಿ ಹೇಳಿದರು.


ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2022-23ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಅಂಗವಾಗಿ ಗಣ ಹೋಮ ಹಾಗೂ ಸರಸ್ವತಿ ಪೂಜೆ ನೆರವೇರಿತು. ಪುರೋಹಿತರಾದ ಕಾರ್ತಿಕ್ ಶಾಸ್ತ್ರಿ ಅವರ ನೇತೃತ್ವದಲ್ಲಿ ಆದಿತ್ಯ ಕೃಷ್ಣ ಹಾಗೂ ರಾಘವೇಂದ್ರ ಅವರ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ., ಸಂಚಾಲಕರಾದ ಕೃಷ್ಣ ಪ್ರಸಾದ್ ನಡ್ಸಾರ್, ಸದಸ್ಯರಾದ ಡಾ. ಮುರಳಿಕೃಷ್ಣ ರೈ, ಡಾ. ಕೃಷ್ಣಪ್ರಸನ್ನ ಕೆ., ಕಾಲೇಜು ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ, ಪ್ರಾಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top