|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವ್ಯಕ್ತಿತ್ವ ನಿರ್ಮಾಣದಿಂದ ವ್ಯಕ್ತಿ ನಿರ್ಮಾಣ ಸಾಧ್ಯ: ಸಿಮ್ರನ್ ಧಿಂಗ್ರಾ

ವ್ಯಕ್ತಿತ್ವ ನಿರ್ಮಾಣದಿಂದ ವ್ಯಕ್ತಿ ನಿರ್ಮಾಣ ಸಾಧ್ಯ: ಸಿಮ್ರನ್ ಧಿಂಗ್ರಾ


ಪುತ್ತೂರು: ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯುಎಸಿ ಘಟಕದ ಸಹಯೋಗದಲ್ಲಿ ಪರ್ಸನಾಲಿಟಿ ಡೆವಲಪ್‍ಮೆಂಟ್ ಹಾಗೂ ಎಂಟರ್‌ಪ್ರಿನರ್‌ಶಿಪ್ ಎನ್ನುವ ವಿಷಯದ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಭಾರತೀಯ ಕೋನ್ರಾಡ್ ಫೌಂಡೇಶನ್ ನವದೆಹಲಿಯ ಸಂಶೋಧನಾ ಅಧಿಕಾರಿ ಸಿಮ್ರನ್ ಧಿಂಗ್ರಾ ಆಗಮಿಸಿದ್ದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಮಾಜದ ಸ್ಥಿತಿಗತಿ ಬದಲಾಯಿಸುವ ಶಕ್ತಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವಕ್ಕಿದ್ದು, ನಮ್ಮ ಬಗ್ಗೆ ನಾವು ತಿಳಿದುಕೊಂಡಾಗ ನಮ್ಮ ವ್ಯಕ್ತಿತ್ವವನ್ನು ಅಭಿವೃದ್ಧಿಗೊಳಿಸಲು ಸಾಧ್ಯ. ಸವಾಲುಗಳು ಎದುರಾದಾಗ ಮಾತ್ರ ಅದನ್ನ ನಿವಾರಿಸುವ ಶಕ್ತಿ ನಮ್ಮಲ್ಲಿ ಹುಟ್ಟಿಕೊಳ್ಳುತ್ತದೆ, ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ಒಡನಾಟ ಹಾಗೂ ತಂಡವನ್ನು ರೂಪಿಸಿಕೊಂಡು ಕೆಲಸ ಮಾಡುವ ಗುಣ ನಮ್ಮಲ್ಲಿ ಇರಬೇಕು ಎಂದು ಹೇಳಿದರು.


ಈ ಸಂದರ್ಭ ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ ಎಸ್ ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಫೌಂಡರ್ ಡಾ.ಶ್ರೀಶ ಭಟ್ ಉಪಸ್ಥಿತರಿದ್ದು, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ರಚನಾ ಸ್ವಾಗತಿಸಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ವಿಜಯ ಸರಸ್ವತಿ ವಂದಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಅನಿಶಾ ಕುಲಾಲ್ ಕಾರ್ಯಕ್ರಮನ್ನು ನಿರೂಪಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم