ಪರಿಸರ ಸಹ್ಯ ಅಭಿವೃದ್ಧಿ ಯೋಜನೆಗಳಿಂದ ಸುಸ್ಥಿರ ಬೆಳವಣಿಗೆ ಸಾಧ್ಯ: ರಂಜಿತ್ ಕುಮಾರ್

Upayuktha
0

ಉಜಿರೆ: ಭಾರತವು ಆರ್ಥಿಕ ಕ್ಷೇತ್ರದಲ್ಲಿ ಅಭಿವೃದ್ದಿ ಹೊಂದಿ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದೆ, ಆದರೆ ಅಭಿವೃದ್ದಿ ಯೋಜನೆಗಳು ಪರಿಸರದ ಜೊತೆಜೊತೆಗೆ ಸಾಗಿದಾಗ ಮಾತ್ರ ಸುಸ್ಥಿರ ಬೆಳವಣಿಗೆ ಸಾಧ್ಯ ಎಂದು ಬೆಳ್ತಂಗಡಿ ವನ್ಯಜೀವಿ ಉಪ ವಲಯರಣ್ಯಾಧಿಕಾರಿ ರಂಜಿತ್ ಕುಮಾರ್ ಹೇಳಿದರು.


ಇತ್ತೀಚೆಗೆ ಉಜಿರೆಯ ಎಸ್‌ಡಿಎಂ ಕಾಲೇಜಿನ ಅರ್ಥಶಾಸ್ತ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ಆಶ್ರಯದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಸಮ್ಯಕ್ ದರ್ಶನ ಸಭಾಂಗಣದಲ್ಲಿ ನಡೆದ 'ಪರಿಸರ ವಿಜ್ಞಾನ ಮತ್ತು ಅರ್ಥಶಾಸ್ತ' ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.


ಇತ್ತೀಚಿನ ದಿನಗಳಲ್ಲಿ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ವನ್ಯಜೀವಿಗಳ ಸಂತತಿ ಕ್ಷೀಣಿಸುತ್ತಿರುವುದು ಆತಂಕಕಾರಿ ವಿಚಾರ. ಕೃಷಿ ಭೂಮಿ ವಾಣಿಜ್ಯ ಉದ್ದೇಶಗಳಿಗೆ ಬಳಕೆಯಾಗಿ, ಹಸಿರು ಮಾಯವಾಗಿ ಆಹಾರ ಪದಾರ್ಥಗಳಿಗೆ ಅಭದ್ರತೆ ಉಂಟಾಗಿದೆ. ಪ್ರತಿಯೊಬ್ಬರು ಸ್ವಯಂಪ್ರೇರಿತರಾಗಿ ಸಸ್ಯ ಮತ್ತು ಪ್ರಾಣಿ ಸಂಪತ್ತುಗಳನ್ನು ಉಳಿಸಿ, ಬೆಳೆಸಿ ನಿಸರ್ಗವನ್ನು ರಕ್ಷಿಸಬೇಕಾದ ಅನಿವಾರ್ಯತೆಯಿದೆ ಎಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ ಹೆಗ್ಡೆ, ಪರಿಸರ ನಮ್ಮ ಆಸೆ ಮತ್ತು ಅಗತ್ಯಗಳನ್ನು ಪೂರೈಸುತ್ತದೆಯೇ ಹೊರತು, ನಮ್ಮ ದುರಾಸೆಗಳನ್ನಲ್ಲ. ಮಾನವನ ದುರ್ನಡತೆಗಳಿಂದ ಪರಿಸರ ನಲುಗುತ್ತಿದೆ. ಮಾನವ ಪ್ರಜ್ಙಾಪೂರ್ವಕವಾಗಿ ಪರಿಸರ ಸಂರಕ್ಷಣೆ ಮಾಡಿದಾಗ ಮಾತ್ರ ಉತ್ತಮ ಆರ್ಥಿಕತ ಬೆಳೆಯಲು ಸಾಧ್ಯ ಎಂದರು.


ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಡಾ.ಗಣರಾಜ ಭಟ್ ಪ್ರಾಸ್ಥಾವಿಕ ಮಾತುಗಳನ್ನಾಡಿ ಶುಭ ಹಾರೈಸಿದರು. ದ್ವಿತೀಯ ಕಲಾ ವಿಭಾಗ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕುರಿತು ತಯಾರಿಸಿದ ಭಿತ್ತಿಚಿತ್ರ ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಪದವಿ ಮತ್ತು ಸ್ನಾತಕೊತ್ತರ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ವಿವಿಧ ಸ್ಪರ್ದೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ಮಹೇಶ್ ಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಯಶ್ವಂತ್ ಮತ್ತು ಸುಚೇತಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಲಾವಣ್ಯ ಸ್ವಾಗತಿಸಿ, ಪುನೀತ್ ಕುಮಾರ್ ವಂದಿಸಿದರು. ವೇಣುಗೋಪಾಲ ಪ್ರಾರ್ಥಿಸಿ, ಶಿವಕುಮಾರ ನಿರೂಪಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top