ಶ್ರೀನಿವಾಸ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನ

Upayuktha
0

ಮುಕ್ಕ: ವಿಶ್ವ ಪರಿಸರ ದಿನದ ಸಂರ‍್ಭದಲ್ಲಿ ಶ್ರೀನಿವಾಸ ಆಸ್ಪತ್ರೆ ಮುಕ್ಕ ಕ್ಯಾಂಪಸ್ ಆವರಣದಲ್ಲಿ ಜೂನ್ 5ರಂದು 250 ಫಲ ನೀಡುವ ಗಿಡಗಳನ್ನು ನೆಡುವ ಕಾರ‍್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪರಿಸರವನ್ನು ಸಂರಕ್ಷಿಸುವುದು ಮತ್ತು ಅರಣ್ಯವನ್ನು ಸಂರಕ್ಷಿಸುವುದು ಆಚರಣೆಯ ಮುಖ್ಯ ಉದ್ದೇಶವಾಗಿತ್ತು.


ಸಮಾರಂಭದ ಮುಖ್ಯ ಅತಿಥಿ ಎ. ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷ ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯದ  ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಅವರು ಸಸ್ಯಗಳನ್ನು ಭವಿಷ್ಯದ ಪೀಳಿಗೆಗೆ ಸಂರಕ್ಷಿಸುವ ಅಗತ್ಯದ ಬಗ್ಗೆ ಸಭೆಗೆ ತಿಳಿಸಿದರು.


ಗೌರವ ಅತಿಥಿ ಎ. ಶಾಮರಾವ್ ಪ್ರತಿಷ್ಠಾನ ಅಧ್ಯಕ್ಷ, ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಿ.ಎ. ರಾಘವೇಂದ್ರರಾವ್ ಫಲ ನೀಡುವ ಸಸ್ಯಗಳ ಮಹತ್ವದ ಕುರಿತು ಸಭೆಗೆ ತಿಳಿಸಿದರು. ಭವಿಷ್ಯದಲ್ಲಿ ಕ್ಯಾಂಪಸ್ನಲ್ಲಿ ಹೆಚ್ಚು ಬೆಳೆದ ಹಣ್ಣುಗಳನ್ನು ಮಾರಾಟ ಮಾಡಲಾಗುವುದು ಮತ್ತು ಅದರಲ್ಲಿ ಬರುವ ಹಣವನ್ನು (ಆದಾಯ) ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲು ಬಳಸಲಾಗುವುದು ಎಂದು ತಿಳಿಸಿದರು.

ಶ್ರೀನಿವಾಸ್ ವಿಶ್ವವಿದ್ಯಾಲಯದ ಅಧ್ಯಾಪಕರು, ಕಾಲೇಜು ಮತ್ತು ಆಸ್ಪತ್ರೆಯ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಈ ಸಂದರ್ದಭದಲ್ಲಿ ಉಪಸ್ಥಿತರಿದ್ದರು.


ಡೀನ್ ಡಾ. ಉದಯ್ ಕುಮಾರ್ ಅತಿಥಿಗಳನ್ನು ಸ್ವಾಗತಿಸಿ, ವೈದ್ಯಕೀಯ ಅಧೀಕ್ಷಕ ಡಾ. ಡೇವಿಡ್ ರೊಸಾರಿಯೊ ವಂದಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top