ಪುತ್ತೂರು: ಭಾರತದ ಭದ್ರತೆಯನ್ನು ಬಲಪಡಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಿಲಿಟರಿಯ ಹೊಸ ನೇಮಕಾತಿ ಮಾದರಿ ಅಗ್ನಿಪಥ್ -ಪರಿಕಲ್ಪನೆ ಮತ್ತು ಅವಕಾಶದ ಮಾಹಿತಿ ಕಾರ್ಯಾಗಾರವು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಜುಲೈ 11 ರಂದು ಕಾಲೇಜಿನ ನೇತಾಜಿ ಸಭಾ ಭವನದಲ್ಲಿ ನಡೆಯಲಿದೆ.
ಭಾರತೀಯ ಮಾಜಿ ಸೇನಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ವಹಿಸಲಿದ್ದಾರೆ ಎಂದು ಪ್ರಾಂಶುಪಾಲ ಮಹೇಶ ನಿಟಿಲಾಪುರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ