ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದಿಂದ ನಿರ್ಮಾಣಗೊಂಡ ‘ಮೌನ’ ಕಿರುಚಿತ್ರಕ್ಕೆ ರಾಷ್ಟ್ರಮಟ್ಟದ ಉತ್ತಮ ಛಾಯಾಗ್ರಹಣ ಪ್ರಶಸ್ತಿ

Upayuktha
0

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಮತ್ತು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಿಂದ ನಿರ್ಮಾಣಗೊಂಡ ಮೌನ ಕಿರುಚಿತ್ರ ರಾಷ್ಟ್ರಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ಉತ್ತಮ ಛಾಯಾಗ್ರಹಣ ಪ್ರಶಸ್ತಿಯನ್ನು ಪಡೆದುಕೊಂಡಿತು.


ಅಳ್ವಾಸ್ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಆಯೋಜಿಸಿದ್ದ ಅರೇನಾ- ರಾಷ್ಟ್ರಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ಒಟ್ಟು ಎಂಬತ್ತು ಕಿರುಚಿತ್ರಗಳು ಭಾಗವಹಿಸಿದ್ದವು. ಅದರಲ್ಲಿ ಆರು ಕಿರುಚಿತ್ರಗಳಿಗೆ ವಿವಿಧ ಪ್ರಶಸ್ತಿಗಳು ಲಭಿಸಿದ್ದು, ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿ ವಿವೇಕಾನಂದ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಗಳು ನಿರ್ಮಿಸಿದ 'ಮೌನ' ಕಿರುಚಿತ್ರಕ್ಕೆ ಲಭಿಸಿದೆ. ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ವಿಜೇತರಿಗೆ ಪ್ರಶಸ್ತಿ ವಿತರಿಸಿದರು.


ಅಚಲ್ ಉಬರಡ್ಕ ನಿರ್ದೇಶನದಲ್ಲಿ ಮೂಡಿಬಂದಿರುವ ಕಿರುಚಿತ್ರಕ್ಕೆ ಅರುಣ್ ಕಿರಿಮಂಜೇಶ್ವರ, ಜಯಶ್ರೀ ಆರ್ಯಾಪು ಚಿತ್ರಕಥೆ ಹೆಣೆದಿದ್ದಾರೆ. ಚಿತ್ರದ ಛಾಯಾಗ್ರಾಹಣ ಹಾಗೂ ಸಂಕಲನವನ್ನು ಪ್ರಸೀದ ಕೃಷ್ಣ ಕಲ್ಲೂರಾಯ ನಿರ್ವಹಿಸಿದ್ದಾರೆ. ಮೌನ ಕಿರುಚಿತ್ರದ ಮುಖ್ಯಭೂಮಿಕೆಯಲ್ಲಿ ಪೃಥ್ವಿ ಪುಣಚ ಹಾಗೂ ಜಗದೀಶ್ ಜೆ ಗಾಣಿಗ ಕಾಣಿಸಿಕೊಂಡಿದ್ದು, ಹಿನ್ನೆಲೆ ಧ್ವನಿ ಕಲಾವಿದನಾಗಿ ಶರತ್ ಕೆಲಸ ಮಾಡಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top