ಮಂಗಳೂರು: ಮಂಗಳೂರಿನ ಭರತಾಂಜಲಿ ನೃತ್ಯ ಕೇಂದ್ರದ ಆಶ್ರಯದಲ್ಲಿ ಉಚಿತವಾಗಿ ನಡೆಸಲ್ಪಡುವ ಭರತಾಂಜಲಿ ಸಂಸ್ಕಾರ ಕೇಂದ್ರದ ಉದ್ಘಾಟನೆ ಸಮಾರಂಭ ಜುಲೈ 16ರಂದು ಶನಿವಾರ ಕೊಟ್ಟಾರದ ಅಬ್ಬಕ್ಕ ನಗರದಲ್ಲಿ ಸಂಜೆ 5ಕ್ಕೆ ನಡೆಯಲಿದೆ.
ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷದ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ಈ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತ ನಿರ್ದೇಶಕ ಎಂ. ಆರ್. ವಾಸುದೇವ, ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್ ಮತ್ತು ಯಕ್ಷ ಗುರುಗಳಾದ ರವಿ ಅಲೆವೂರಾಯ ಅವರು ಭಾಗವಹಿಸಲಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಭರತಾಂಜಲಿ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ