ಬೆಂಗಳೂರು: ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ವತಿಯಿಂದ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕೃತಿಗಳ ಲೋಕಾರ್ಪಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶರವರು ಉದ್ಘಾಟಿಸಿದರು.
ಪ್ರಜಾವಾಣಿ ಪ್ರಧಾನ ಸಂಪಾದಕ ರವೀಂದ್ರ ಭಟ್, ಕ.ಗಾ.ಸ್ಮಾ.ನಿ.ಅಧ್ಯಕ್ಷ ನಾಡೋಜ ಡಾ. ವೂಡೇ ಪಿ. ಕೃಷ್ಣ, ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಹಾಗೂ ಪ್ರಶಸ್ತಿ ಪುರಸ್ಕೃತರಾದ ಡಾ.ಗಜಾನನ ಶರ್ಮ, ಡಾ.ಶರಣು ಹುಲ್ಲೂರು, ಜಮೀಲ್ ಸಾವಣ್ಣ, ಡಾ.ವಿಜಯ ಉಪಸ್ಥಿತರಿದ್ದರು.