ನವದೆಹಲಿ: ದೇಶದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಇಂದು ಭಾರತದ '15ನೇ ರಾಷ್ಟ್ರಪತಿ'ಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಬೆಳಗ್ಗೆ 10-15ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.
ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸೆಂಟ್ರಲ್ ಹಾಲ್‌ಗೆ ಕರೆದೊಯ್ಯಲಿದ್ದಾರೆ. ದ್ರೌಪದಿ ಮುರ್ಮು ಅಲ್ಲಿಗೆ ಬಂದ ನಂತರ, ಸೆಂಟ್ರಲ್ ಹಾಲ್‌ನಲ್ಲಿ ರಾಷ್ಟ್ರಗೀತೆ ಮೊಳಗುತ್ತದೆ. ನಂತರ ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಸಮ್ಮುಖದಲ್ಲಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಸ್ವೀಕರಿಸುವರು.