ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡಕ್ಕೆ ಪ್ರಶಸ್ತಿ

Upayuktha
0

ಪುತ್ತೂರು: ಸುಳ್ಯದ ಜಾಲ್ಸೂರಿನ ವಿವೇಕಾನಂದ ಸ್ಕೂಲ್ ವಿನೋಬನಗರದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.


ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಋತ್ವಿಕ್ ಸಾಯಿ ಗಣೇಶ್ (ಕುಂದಾಪುರದ ತಾಲೂಕಿನ ಸಿದ್ದಾಪುರದ ಜನಾರ್ಧನ ಎಂ.ಆರ್ ಮತ್ತು ಜ್ಯೋತಿ ಕೆ.ಸಿ ದಂಪತಿ ಪುತ್ರ) ಪ್ರಥಮ ಸ್ಥಾನ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೈಝೆನ್ ಎಸ್ (ಬಂಟ್ವಾಳದ ದೇವಸ್ಯ ಸೂರ್ಯನಾರಾಯಣ ಎನ್ ಕೆ ಮತ್ತು ಸುಮನ ಎಸ್ ಎನ್ ದಂಪತಿ ಪುತ್ರ) ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ದೀಪ್ತಿ ಲಕ್ಷ್ಮಿ ಕೆ (ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆಯ ಶಂಕರ ಪ್ರಸಾದ್ ಕೆ ಮತ್ತು ಉಷಾ ದಂಪತಿ ಪುತ್ರಿ)  ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ| ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top