|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್‌ನ ಪ್ರಥಮ ಬ್ಯಾಚ್ ಉದ್ಘಾಟನೆ

ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್‌ನ ಪ್ರಥಮ ಬ್ಯಾಚ್ ಉದ್ಘಾಟನೆ


ನಿಟ್ಟೆ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲೊಂದಾದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸೆಂಟರ್ ನ ವಿದ್ಯಾಸಂಸ್ಥೆಗಳಾಗಿರುವ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಬಿ.ಟೆಕ್ ಕೋರ್ಸ್ ಹಾಗೂ ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ವಿವಿಧ ಕೋರ್ಸ್ ಗಳ 2022 ನೇ ಸಾಲಿನ ನೂತನ ಬ್ಯಾಚ್ ನ ಉದ್ಘಾಟನಾ ಕಾರ್ಯಕ್ರಮವು ಜು.23 ರಂದು ನಿಟ್ಟೆಯ ಸದಾನಂದ ಸಭಾಂಗಣದಲ್ಲಿ ಜರುಗಿತು.

 

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್.ವಿನಯ ಹೆಗ್ಡೆ ಅವರು ವಿದ್ಯಾರ್ಥಿಗಳನ್ನು ಹಾಗೂ ಪೋ‍ಷಕರನ್ನು ಉದ್ದೇಶಿಸಿ ಮಾತನಾಡಿದರು.


'ಇಂದಿನ ದಿನಗಳಲ್ಲಿ ಅಗತ್ಯತೆಗೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ್ಯತೆಯನ್ನು ಬೆಳೆಸಿಕೊಳ್ಳಬೇಕು. ತಮ್ಮತಮ್ಮ ಐಚ್ಛಿಕ ವಿಷಯಗಳಲ್ಲಿ ಸಮರ್ಥ ಬೆಳವಣಿಗೆ ತೋರುವುದು ಅಗತ್ಯ. ನಿಟ್ಟೆ ವಿದ್ಯಾಸಂಸ್ಥೆಯು ನಿಮ್ಮನ್ನು ಈ ದೃಷ್ಠಿಯಲ್ಲಿ ತಯಾರುಮಾಡಲು ಇಚ್ಘಿಸುತ್ತದೆ. ವಿದ್ಯೆ ಹಾಗೂ ಉದ್ಯೋಗದೊಂದಿಗೆ ಸಮಾಜದ ಏಳಿಗೆಗೂ ನೀವು ಶ್ರಮಿಸಬೇಕು. ತಾಂತ್ರಿಕ ಶಿಕ್ಷಣದೊಂದಿಗೆ ದೈಹಿಕ ಆರೋಗ್ಯ ಹಾಗೂ ಮಾನಸಿಕ ನೆಮ್ಮದಿಯ ನಿಟ್ಟಿನಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ವಿಷಯಗಳಿಗೂ ಸಮಾನ ಮಹತ್ವವನ್ನು ನೀಡಿ ಮುನ್ನಡೆಯುವುದು ಅಗತ್ಯ' ಎಂದು ಅವರು ಹೇಳಿದರು.


ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಪ್ರೋ.ಡಾ.ಶಾಂತರಾಮ್ ಶೆಟ್ಟಿ ಅವರು ಮಾತನಾಡಿ ನಿಟ್ಟೆ ವಿದ್ಯಾಸಂಸ್ಥೆಯ ಇತಿಹಾಸ, ಬೆಳೆದುಬಂದ ಹಾದಿ ಹಾಗೂ ಸಮಾಜದ ಏಳಿಗೆಯಲ್ಲಿ ನಿಟ್ಟೆ ಸಮೂಹ ಸಂಸ್ಥೆಗಳ ಪಾತ್ರದ ಬಗೆಗೆ ನೂತನ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿವರಿಸಿದರು.


ಇನ್ನೋರ್ವ ಅತಿಥಿ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ಅವರು ನಿಟ್ಟೆ ವಿಶ್ವವಿದ್ಯಾಲಯದ ಬಗೆಗೆ ಹಾಗೂ ಮುಂದಿನ ಯೋಜನೆಗಳ ಬಗೆಗೆ ತಿಳಿಸಿದರು.


ನಿಟ್ಟೆ ವಿಶ್ವವಿದ್ಯಾಲಯದ ಸಹ ಕುಲಪತಿ ಡಾ.ಎಂ.ಎಸ್.ಮೂಡಿತ್ತಾಯ ಅವರು ಮಾತನಾಡುತ್ತಾ ನಿಟ್ಟೆ ವಿಶ್ವವಿದ್ಯಾಲಯಕ್ಕೆ ಮುಂಬರುವ ದಿನಗಳಲ್ಲಿ ದೊರೆಯಬಹುದಾದ ಅವಕಾಶಗಳ ಬಗೆಗೆ ವಿವರಿಸಿದರು.


ವೇದಿಕೆಯಲ್ಲಿ ನಿಟ್ಟೆ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಕುಲಸಚಿವ ಡಾ.ಹರ್ಷ ಹಲಹಳ್ಳಿ ಹಾಗೂ ಕಂಟ್ರೋಲರ್ ಆಫ್ ಎಕ್ಸಾಮಿನೇಶನ್ ಡಾ.ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.


ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಸ್ವಾಗತಿಸಿದರು. ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ವೀಣಾ ಬಿ.ಕೆ ವಂದಿಸಿದರು. ಡೀನ್ ಸ್ಟೂಡೆಂಟ್ ವೆಲ್ಫೇರ್ ಡಾ.ನರಸಿಂಹ ಬೈಲಕೇರಿ ಕಾರ್ಯಕ್ರಮ ಸಂಯೋಜಿಸಿದರು. ಬಯೋಟೆಕ್ ವಿಭಾಗದ ಪ್ರಾಧ್ಯಾಪಕಿ ಡಾ.ವಿದ್ಯಾ ಎಸ್.ಎಂ ಕಾರ್ಯಕ್ರಮ ನಿರೂಪಿಸಿದರು.


ಸಭಾ ಕಾರ್ಯಕ್ರಮದ ಅನಂತರ ನಿಟ್ಟೆ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಡೀನ್ ಎಕಾಡೆಮಿಕ್ಸ್ ಡಾ.ಐ ರಮೇಶ್ ಮಿತ್ತಂತಾಯ ಪಠ್ಯಕ್ರಮ ಹಾಗೂ ತರಗತಿಗಳ ಬಗೆಗೆ ವಿವರಿಸಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಜೊತೆ ಸಂವಾದ ನಡೆಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post