ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಹಾಗೂ ಕರ್ನಾಟಕ ರಾಜ್ಯ ಮಹಾವಿದ್ಯಾನಿಲಯ ಶಿಕ್ಷಕರ ಸಂಘಗಳ ಸಹಯೋಗದೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ, ಪದವಿಪೂರ್ವ, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಕಾರ್ಗಿಲ್ ವಿಜಯ ದಿವಸದ ಸ್ಮರಣೆ- 'ಅಭಿನಯ ಶೋಧ- 2022’ ಎಂಬ ಅಂತರ್ ಕಾಲೇಜು ಮಟ್ಟದ ಕಿರು ಪ್ರಹಸನ ಸ್ಪರ್ಧೆಯನ್ನು ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಜುಲೈ 26 (ಮಂಗಳವಾರ) ಸಂಜೆ 3.30 ಕ್ಕೆ ಆಯೋಜಿಸಲಾಗಿದೆ.
ಭಾರತೀಯ ವಾಯುಪಡೆಯ ನಿವೃತ್ತ ಸೇನಾನಿ ಏರ್ವೇಸ್ ಮಾರ್ಷಲ್ ರಮೇಶ್ ಕಾರ್ಣಿಕ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ ಅಧ್ಯಕ್ಷತೆ ವಹಿಸಲಿದ್ದಾರೆ, ಎಂದು ಕೆಆರ್ಎಂಎಸ್ಎಸ್ ಕಾರ್ಯದರ್ಶಿ ವೆಂಕಟೇಶ್ ನಾಯಕ್ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ