ಸೋಮವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಂಸದ ನಳಿನ್‍ಕುಮಾರ್ ಕಟೀಲ್ ಮತ್ತು ಜಿಲ್ಲೆಯ ಶಾಸಕರು ಅಭಿನಂದನೆ ಸಲ್ಲಿಸಿದರು.
ಉಜಿರೆ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸೋಮವಾರ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರುಗಳಾದ ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು, ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಧರ್ಮಸ್ಥಳಕ್ಕೆ ಬಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಅಭಿನಂದನೆ ಸಲ್ಲಿಸಿದರು.
ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ, ಕಿಯೊನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಧರ್ಮಸ್ಥಳ, ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಮೂಡಬಿದ್ರೆಯ ದಿನೇಶ್ ಆನಡ್ಕ, ನೋಟರಿ ಬಾಹುಬಲಿ ಪ್ರಸಾದ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಮೂಡಬಿದ್ರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಹೆಗ್ಗಡೆಯವರಿಗೆ ವಿಶೇಷ ಪ್ರಸಾದ ನೀಡಿ ಆಶೀರ್ವದಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ