ಮಂಗಳೂರು ವಿವಿ: ಜು. 8 ರಂದು ಕಟ್ಟಡ ಉದ್ಘಾಟನೆ, ವಸತಿ ನಿಲಯದ ಶಂಕುಸ್ಥಾಪನೆ

Upayuktha
0

 


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರೂಸಾ ಅನುದಾನದಡಿ ನಿರ್ಮಿಸಲಾಗಿರುವ ಭೂಗೋಳ ಶಾಸ್ತ್ರ ಅಧ್ಯಯನ ವಿಭಾಗದ ನೂತನ ಕಟ್ಟಡ ಹಾಗೂ ವಿಭಾಗದ ಉದ್ಘಾಟನೆ ಮತ್ತು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ನ ಯೋಜನೆ (CAFES) ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ವಸತಿ ನಿಲಯದ ಶಂಕುಸ್ಥಾಪನೆ ಕಾರ್ಯಕ್ರಮ ವಿಶ್ವವಿದ್ಯಾನಿಲಯದ ಒಳಾಂಗಣ ಕ್ರೀಡಾಂಗಣದಲ್ಲಿ ಜುಲೈ 8 (ಶುಕ್ರವಾರ) ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. 


ಸಂಸದ ನಳಿನ್ ಕುಮಾರ್ ಕಟೀಲ್ ನೂತನ ಕಟ್ಟಡಗಳನ್ನು ಉದ್ಘಾಟಿಸಿದರೆ, ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಸತಿ ನಿಲಯದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಪ್ರೊ. ಎಂ. ಎಸ್ ತಳವಾರ್ ಗೌರವ ಅತಿಥಿಗಳಾಗಿರಲಿದ್ದಾರೆ.


ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ ಕೆ, ಕಾರ್ಯಕಾರಿ ಅಭಿಯಂತರ ದೇವಿಪ್ರಸಾದ್ ಎಂ, ಭೂಗೋಳಶಾಸ್ತ್ರ ವಿಭಾಗದ ಸಂಯೋಜಕ ಡಾ. ದಶರಥ ಪಿ. ಅಂಗಡಿ, ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಬಿ ಹೆಚ್ ಶೇಖರ್ ಮೊದಲಾದವರು ಉಪಸ್ಥಿತರಿರಲಿದ್ದಾರೆ. 


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top