ಪುತ್ತೂರು: ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಮಂಗಳೂರು ವಿವಿ ಅಂತರ್ ಕಾಲೇಜು ಮಟ್ಟದ ಚೆಸ್ ಪಂದ್ಯಾಟದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿನ ಕ್ರೀಡಾ ಪಟುಗಳು ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಗುಲಾಬಿ ಶಿವರಾಮ ನೊಂಡ ಪರ್ಯಾಯ ಫಲಕವನ್ನು ತನ್ನದಾಗಿಸಿಕೊಂಡಿದ್ದಾರೆ. ತಂಡದಲ್ಲಿ ಶ್ರೀರಾಮ (ತೃತೀಯ ಬಿಎ), ಅಚ್ಯುತ ಶ್ರೀಶ ಕೆ (ತೃತೀಯ ಬಿಎಸ್ಸಿ) ಕೌಸ್ತುಭ (ದ್ವಿತೀಯ ಬಿಕಾಂ, ಧನುಷ್ (ದ್ವಿತೀಯ ಬಿಸಿಎ), ಅಭಯಶಂಕರ (ತೃತೀಯ ಬಿಕಾಂ) ಭಾಗವಹಿಸಿದ್ದರು. ಜೊತೆಗೆ ಕಾಲೇಜಿನ ಮಹಿಳಾ ಚೆಸ್ ತಂಡವು ಅಂತಿಮವಾಗಿ ಏಳನೇಯ ಸ್ಥಾನವನ್ನು ಪಡೆದಿರುತ್ತಾರೆ.
ಬೆಸ್ಟ್ ಬೋರ್ಡ್ ಪ್ಲೇಯರ್ ಬಹುಮಾನ:
ಕಾಲೇಜಿನ ತೃತೀಯ ಬಿಎಸ್ಸಿ ವಿದ್ಯಾರ್ಥಿ ಅಚ್ಯುತ ಶ್ರೀಶ ಇವರು ಬೆಸ್ಟ್ ಫಸ್ಟ್ ಬೋರ್ಡ್ ಪ್ಲೇಯರ್ ಹಾಗೂ ದ್ವಿತೀಯ ಬಿಕಾಂನ ಕೌಸ್ತುಭ ಬೆಸ್ಟ್ ಫಿಫ್ತ್ ಬೋರ್ಡ್ ಪ್ಲೇಯರ್ ಬಹುಮಾನವನ್ನು ಪಡೆದಿರುತ್ತಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ, ಯತೀಶ್ ಕುಮಾರ್ ಬಾರ್ತಿಕುಮೇರ್ ತರಬೇತಿ ಹಾಗೂ ಮಾರ್ಗದರ್ಶನ ನೀಡಿರುತ್ತಾರೆ.
ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರು ಹಾಗೂ ಪ್ರಾಂಶುಪಾಲರು, ಅಧ್ಯಾಪಕ ವೃಂದ ವಿಜೇತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ