ನಿಟ್ಟೆ ಹಾಗೂ ಇಲೈಟ್ ಇಂಡಸ್ಟ್ರೀಸ್ ಸಂಸ್ಥೆಯ ನಡುವೆ ಶೈಕ್ಷಣಿಕ ಒಪ್ಪಂದ

Upayuktha
0

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಇಲೈಟ್ ಇಂಡಸ್ಟ್ರೀಸ್ ಗ್ರೂಪ್ ಆಫ್ ಕಂಪೆನೀಸ್, ನನಿ ದಮನ್ & ಡಿಯು ನ ನಡುವಿನ ಶೈಕ್ಷಣಿಕ ಒಪ್ಪಂದಕ್ಕೆ ಸಹಿ ಹಾಕುವ ಹಾಗೂ ಹಸ್ತಾಂತರ ಮಾಡುವ ಕಾರ್ಯಕ್ರಮವು ಜು.12 ರಂದು ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ನಡೆಯಿತು. ಒಪ್ಪಂದದ ಪ್ರಮಾಣಪತ್ರಕ್ಕೆ ನಿಟ್ಟೆ ಸಂಸ್ಥೆಯ ವತಿಯಿಂದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ| ನಿರಂಜನ್ ಎನ್.ಚಿಪ್ಳೂಣ್ಕರ್ ಹಾಗೂ ಇಲೈಟ್ ಇಂಡಸ್ಟ್ರೀಸ್ ಸಂಸ್ಥೆಯ ವತಿಯಿಂದ ಸಂಸ್ಥೆಯ ಸಿ.ಇ.ಒ ದಿನೇಶ್ ಶೆಟ್ಟಿ ಯವರು ಸಹಿಹಾಕಿದರು.


ಈ ಸಂದರ್ಭದಲ್ಲಿ ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಂಶುಪಾಲ ಡಾ| ಶ್ರೀನಿವಾಸ ರಾವ್ ಬಿ.ಆರ್, ಕ್ಯಾಂಪಸ್ ಮೈಂಟೆನೆನ್ಸ್ & ಡೆವಲಪ್‌ಮೆಂಟ್ ನ ನಿರ್ದೇಶಕ ಯೋಗೀಶ್ ಹೆಗ್ಡೆ, ಡೀನ್ ಡಾ.ಸುದೇಶ್ ಬೇಕಲ್, ಡಾ.ನರಸಿಂಹ ಬೈಲ್ಕೇರಿ, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ಪೈ, ವಿಭಾಗದ ಸಹಪ್ರಾಧ್ಯಾಪಕರು ಹಾಗೂ ಇಲೈಟ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಒಪ್ಪಂದದ ಪ್ರಕಾರ ಇಲೈಟ್ ಇಂಡಸ್ಟ್ರೀಸ್ ಗ್ರೂಪ್ ಆಫ್ ಕಂಪೆನೀಸ್ ಸಂಸ್ಥೆಯು ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಧ್ಯಾಪಕರಿಗೆ ಲಿಕ್ವಿಡ್ ನೈಟ್ರೋಜನ್ ಬಗೆಗೆ ಸಂಶೋಧನೆ ನಡೆಸಲು ಸಹಕರಿಸುವುದರೊಂದಿಗೆ ವಿದ್ಯಾರ್ಥಿಗಳಿಗೆ ವಿವಿಧ ಪ್ರಾಜೆಕ್ಟ್, ತರಬೇತಿ ಹಾಗೂ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲು ಉತ್ತಮ ಸಹಾಯ ಮಾಡಲಿದೆ.


ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ಪೈ ಸ್ವಾಗತಿಸಿದರು. ಮೆಕ್ಯಾನಿಕಲ್ ವಿಭಾಗದ ಸಹಪ್ರಾಧ್ಯಾಪಕ ಡಾ| ನಿತಿನ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಮೆಕ್ಯಾನಿಕಲ್ ವಿಭಾಗದ ಸಹಪ್ರಾಧ್ಯಾಪಕ ಡಾ.ಉದಯ್ ಅವರು ಇಲೈಟ್ ಸಂಸ್ಥೆಯೊಂದಿಗಿನ ಯೋಜನೆಗಳ ಪ್ರಧಾನ ಅಧಿಕಾರಿ ಆಗಿರುವರು ಎಂದು ಕಾಲೇಜಿನ ಪತ್ರಿಕಾ ಪ್ರಕಟಣೆಯಲ್ಲಿ ಪ್ರಾಂಶುಪಾಲ ಡಾ.ನಿರಂಜನ್ ಎನ್. ಚಿಪ್ಳೂಣ್ಕರ್ ತಿಳಿಸಿರುವರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top