ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಕರ್ನಾಟಕದ ಮಾರ್ಗರೇಟ್ ಆಳ್ವ ಸಂಸತ್ತಿನಲ್ಲಿಂದು ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರಿದ್ದರು.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದೆ. ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ.