ಕೊಲಂಬೋ: ನೆರೆಯ ದ್ವೀಪರಾಷ್ಟ್ರ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ.
ತೀವ್ರ ರಾಜಕೀಯ ಬಿಕ್ಕಟ್ಟಿನಿಂದಾಗಿ ಭಾರಿ ಭದ್ರತೆಯ ಮಧ್ಯೆ ಇಂದು ದೇಶದ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಇಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದ್ದು ಹಂಗಾಮಿ ಅಧ್ಯಕ್ಷರಾಗಿದ್ದ ರಾನಿಲ್ ವಿಕ್ರಮಸಿಂಘೆ ರಾಷ್ಟ್ರದ 9ನೇ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.