
ಸುಬ್ರಹ್ಮಣ್ಯ: ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 25ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದ್ದು, ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರ್ಮ್ ಪಡೆದು ಭರ್ತಿ ಮಾಡಿ ದೇವಳಕ್ಕೆ ಸಲ್ಲಿಸಬಹುದು.
ವಿವಾಹವಾಗಲು ಬಯಸುವವರು ಅರ್ಜಿ ಸಲ್ಲಿಸಲು ಆಗಸ್ಟ್ 4 ಕೊನೆಯ ದಿನಾಂಕವಾಗಿದ್ದು, ವರನಿಗೆ ಶ್ರೀ ದೇವಳದಿಂದ ಪ್ರೋತ್ಸಾಹ ಧನ 5 ಸಾವಿರ, ವಧುವಿಗೆ 10 ಸಾವಿರ ರೂ, 40 ಸಾವಿರ ಮೌಲ್ಯದ ಚಿನ್ನದ ತಾಳಿ, 2 ಚಿನ್ನದ ಗುಂಡು ಸೇರಿದಂತೆ ಒಟ್ಟು 55 ಸಾವಿರ ರೂ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ 08257-281224, 236200, 281700, 281423 ಸಂಪರ್ಕಿಸಲು ತಿಳಿಸಲಾಗಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment