ಕಾರ್ಯ ಸಾಧನೆ‌ಮಾಡಲು ಸ್ಪಷ್ಟ ಗುರಿಯನ್ನು ನಿಗದಿಪಡಿಸಿಕೊಳ್ಳಿ: ಸಂಜೀವ ಮಠಂದೂರು

Upayuktha
0



ಪುತ್ತೂರು: ಯಾವ ವ್ಯಕ್ತಿ ಉತ್ತಮ‌ ಶಿಕ್ಷಣವನ್ನು ಪಡೆಯುತ್ತಾನೋ ಅವನು ಸಮಾಜದಲ್ಲಿ ಉತ್ತಮ ಜೀವನವನ್ನು ನಡೆಸಬಲ್ಲ. ನಮ್ಮ‌ ವ್ಯಕ್ತಿತ್ವವನ್ನು ಉತ್ತಮವಾಗಿ ರೂಪುಗೊಳಿಸಲು ಸ್ವಾಮೀ ವಿವೇಕಾನಂದರಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಬೇಕು. ಜೊತೆಗೆ ನಮ್ಮ ಗುರಿಗಳನ್ನು ತಲುಪಲು ಕಠಿಣ ಪರಿಶ್ರಮವನ್ನೂ ಮಾಡಬೇಕು. ಅಲ್ಲದೇ ನಮ್ಮ ಭವಿಷ್ಯಕ್ಕಾಗಿ ನಾವು ಮೌಲ್ಯಾಧಾರಿತ ಶಿಕ್ಷಣವನ್ನು ಪಡೆಯಬೇಕು ಎಂದು ಪುತ್ತೂರಿನ ವಿಧಾನ ಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಹೇಳಿದರು.


ಇವರು ಪುತ್ತೂರಿನ ವಿವೇಕಾನಂದ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಈ ಸಂದರ್ಭದಲ್ಲಿ ಇನ್ನೋರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಸರಕಾರದ ಅಡ್ವೋಕೇಟ್ ಜನರಲ್ ಅರುಣ ಶ್ಯಾಮ ಮಾತನಾಡಿ, ವಿದ್ಯಾರ್ಥಿಗಳು ಈ ಸಮಯದಲ್ಲಿ ಶಿಕ್ಷಣಕ್ಕೆ ಒತ್ತು ನೀಡಬೇಕು ಹಾಗೂ ಉತ್ತಮ ಶಿಕ್ಷಣವನ್ನು ಪಡೆದುಕೊಂಡು ದೇಶಸೇವೆಯನ್ನು ಮಾಡಲು ಮುನ್ನುಗ್ಗುವ ಉತ್ತಮ ತರುಣ ಪಡೆ ನೀವಾಗಬೇಕು ಎಂದು  ಹೇಳಿದರು.


ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ, ಆಧುನೀಕರಣವೇ ಬೇರೆ, ಪಾಶ್ಯಾತೀಕರಣವೇ ಬೇರೆ ಅದನ್ನು ಮೊದಲಾಗಿ ಭಾರತೀಯರು ಅರಿಯಬೇಕು. ದೇಶಕ್ಕಾಗಿ ಶ್ರಮಿಸಿದ ಎಲ್ಲಾ ಸ್ವಾತಂತ್ರ ಹೋರಾಟಗಾರರನ್ನು ಸ್ಮರಿಸುವುದು ಭಾರತೀಯನ ಆದ್ಯ ಕರ್ತವ್ಯವೂ ಆಗಿದೆ. ಇಲ್ಲಿನ ಆಚಾರ ವಿಚಾರ ಧರ್ಮ, ಸಂಸ್ಕೃತಿ ಮೌಲ್ಯಗಳು ಅತ್ಯಂತ ವಿಶೇಷ ಉಳ್ಳದ್ದು. ಹಾಗಾಗಿ ಇಂದು ನಮ್ಮ‌ ದೇಶವನ್ನು ಎಲ್ಲರೂ ತಿರುಗಿ ನೋಡುವಂತಾಗಿದೆ ಎಂದರು.


ಈ ಸಂದರ್ಭದಲ್ಲಿ ಗೌರವ ಉಪಸ್ಥಿತಿ ವಹಿಸಿದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಏನೆಲ್ಲಾ ಕಲಿಯಲು ಅವಕಾಶವಿದೆಯೋ ಅದನ್ನು ಕಲಿತುಕೊಂಡು ವಿದ್ಯಾರ್ಥಿಗಳು ಅಧ್ಯಯನ ಶೀಲರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.



ಬಹುಮಾನ ವಿತರಣೆ:

ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳಲ್ಲಿ ರ್ಯಾಂಕ್ ವಿಜೇತರಿಗೆ ಸನ್ಮಾನ ಮಾಡಲಾಯಿತು. ಜೊತೆಗೆ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ದ ಪರೇಡ್ ನಲ್ಲಿ ಭಾಗವಹಿಸಿದ ಎನ್ ಸಿಸಿ ಕೆಡೆಟ್ ಹೇಮಸ್ವಾತಿ ಹಾಗೂ ಯಶಿತಾ, ಸಾಹಿತ್ಯ ಇವರನ್ನು ಸನ್ಮಾನಿಸಲಾಯಿತು ಹಾಗೂ ಸಾಂಸ್ಕೃತಿಕ ಕ್ಷೇತ್ರಗಳ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.


ವೇದಿಕೆಯಲ್ಲಿ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್, ಕಾಲೇಜಿನ ಪ್ರಾಂಶುಪಾಲ ಪ್ರೋ.ವಿಷ್ಣು ಗಣಪತಿ ಭಟ್, ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ನಿವೃತ್ತ ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು


ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ವಾರ್ಷಿಕ ವರದಿ ವಾಚಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಪ್ರಾಸ್ತಾವಿಕ ಮಾತುಗಳಾನ್ನಾಡಿದರು.ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ಎಚ್.ಜಿ ಸ್ವಾಗತಿಸಿ ಉಪನ್ಯಾಸಕಿಯರಾದ ಡಾ.ವಿಜಯಸರಸ್ವತಿ ಹಾಗೂ ಡಾ.ರೇಖಾ ಪಿ ಎಂ ಕಾರ್ಯಕ್ರಮ ನಿರೂಪಿಸಿದರು.


ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top