ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಂಶುಪಾಲರಾದ ಡಾ. ಸುರೇಶ್ ರೈ ನೆರವೇರಿಸಿದರು.
ಮಾನವನನ್ನು ದಾನವನನ್ನಾಗಿ ಮಾಡುವುದೇ ಮಾದಕ ವ್ಯಸನ. ಇಂತಹ ಮಾದಕ ವ್ಯಸನದಿಂದ ಸಮಾಜ ಮುಕ್ತವಾಗಬೇಕಾದರೆ ಮೊದಲು ತನ್ನನ್ನು ತಾನು ವ್ಯಸನದಿಂದ ದೂರವಿರುವಂತೆ ಮನಸ್ಸನ್ನು ಹತೋಟಿಯಲ್ಲಿಡಬೇಕು. ಇದರಿಂದ ಮಾತ್ರ ಇಡೀ ಸಮಾಜವನ್ನು ಸ್ವಾಸ್ಥ್ಯ ಸಮಾಜವನ್ನಾಗಿಸಬಹುದು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. ದುಶ್ಚಟ ಮುಕ್ತ ಸಮಾಜವೇ ನಮ್ಮ ದೇಶದ ಅಭಿವೃದ್ಧಿಗೆ ಮೂಲ ಮಂತ್ರ. ಈ ಕನಸನ್ನು ಮಹಾತ್ಮ ಗಾಂಧೀಜಿಯವರು ಕಂಡರು. ಆದರೂ ಸ್ವಾತಂತ್ರ ದೊರೆತು ಇಷ್ಟು ವರ್ಷವಾದರೂ ನಾವುಗಳು ದುಶ್ಚಟ ಮುಕ್ತ, ಮದ್ಯಮುಕ್ತ ಸಮಾಜವನ್ನಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿಲ್ಲ. ಸಮಾಜದ ಸ್ವಾಸ್ಥ್ಯಕ್ಕಾಗಿ ವಿದ್ಯಾರ್ಥಿ ದೆಶೆಯಲ್ಲಿಯೇ ವ್ಯಾಪಕ ಅರಿವು ಮೂಡಿಸುವ ಅಗತ್ಯವಿದೆ ಎಂದು ಡಾ.ರೈ ತಿಳಿಸಿದರು.
ಕಾರ್ಯಕ್ರಮದಲ್ಲಿ SKDRP ಉಡುಪಿ ಜಿಲ್ಲಾ ಮಟ್ಟದ ಸಂನ್ಮೂಲ ವ್ವಕ್ತಿ ನವೀನ್‍ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಮಾನಸಿಕ ವಾಗಿ ಮತ್ತು ದೈಹಿಕವಾಗಿ ಸದೃಢರಾದಾಗ ಮಾತ್ರ ಕಲಿಕೆಯತ್ತ ಆಸಕ್ತಿ ವಹಿಸಬಹುದು ಎಂದು ಸಲಹೆ ನೀಡಿದರು.ಯುವ ಜನತೆ ದೇಶದ ಶಕ್ತಿಯಾಗಿದ್ದು, ಒಳ್ಳೆಯ ಮಾರ್ಗದರ್ಶನದಲ್ಲಿ ವಿದ್ಯಾ ವಂತರಾದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ಹೇಳಿದರು.
ಕಾರ್ಯ ಕ್ರಮದಲ್ಲಿ ಮಲ್ಪೆ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಪ್ರಶಾಂತ ಸಾಲಿಯಾನ್ ಮತ್ತು ಆಶಾಲತ ಉಪಸ್ಥಿತರಿದ್ದರು. ಜನಜಾಗೃತಿ ವೇದಿಕೆಯ ಸ್ಥಳೀಯ ಘಟಕದ ಪದಾಧಿಕಾರಿಗಳು ಕಾರ್ಯ ಕ್ರಮ ನಡೆಸಿಕೊಟ್ಟರು.
ಕಾಲೇಜಿನ ಎಲ್ಲಾ ಸ್ನಾತಕೋತ್ತರ ವಿಭಾಗದ ಸಂಚಾಲಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯ ಕ್ರಮ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿನಿ ಕು.ಅನುಷಾ ಅವರ ಪ್ರಾರ್ಥನೆ ಯೊಂದಿಗೆ ಆರಂಭವಾಯಿತು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ