ಮಂಗಳೂರು: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಮತ್ತು ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ಸಂಘ (ಕನ್ನಡ ವಿಭಾಗ) ದ ವತಿಯಿಂದ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಜುಲೈ 15 (ಶುಕ್ರವಾರ) ರಂದು ಬೆಳಗ್ಗೆ 10 ಗಂಟೆಗೆ ರಾಜ್ಯಮಟ್ಟದ ಭಾಷಾಂತರ ಕಮ್ಮಟ ಆಯೋಜಿಸಲಾಗಿದೆ.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಅಜಕ್ಕಳ ಗಿರೀಶ್ ಭಟ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಂಶುಪಾಲೆ ಡಾ. ಅನಸೂಯ ರೈ ಅವರ ಗೌರವ ಉಪಸ್ಥಿತಿಯಿರಲಿದೆ. ಮುಂಬೈ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಅಧ್ಯಕ್ಷ ಮತ್ತು ವಿಶ್ರಾಂತ ಪ್ರಾಧ್ಯಾಪಕ ಡಾ. ತಾಳ್ತಜೆ ವಸಂತ ಕುಮಾರ ದಿಕ್ಸೂಚಿ ಭಾಷಣ ನೆರವೇರಿಸಲಿದ್ದಾರೆ. ʼಭಾಷಾಂತರ ಒಂದು ಅಧ್ಯಯನʼ, ʼಕನ್ನಡ ಮತ್ತು ಭಾಷಾಂತರʼ, ʼಕನ್ನಡ-ತುಳು ಭಾಷಾಂತರದ ಸಾಧ್ಯತೆಗಳುʼ ಮೊದಲಾದ ಅವಧಿಗಳ ಬಗ್ಗೆ ಗಣ್ಯರು ವಿಚಾರ ಸಂಕಿರಣ ನಡೆಸಿಕೊಡಲಿದ್ದಾರೆ. ಸಂತ ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಸುಧಾ ಕುಮಾರಿ ಪ್ರಾಯೋಗಿಕ ಅವಧಿ ನಡೆಸಿಕೊಡಲಿದ್ದಾರೆ.
ವಿಶ್ವವಿದ್ಯಾನಿಲಯ ಕಾಲೇಜಿನ ಹಿಂದಿ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಮುರಳೀಧರ ನಾಯ್ಕ್ ಸಮಾರೋಪ ಭಾಷಣ ನೆರವೇರಿಸಲಿದ್ದಾರೆ. ಇದೇ ಕಾಲೇಜಿನ ಕನ್ನಡ ವಿಭಾಗದ ವಿಶ್ರಾಂತ ಮುಖ್ಯಸ್ಥೆ ಡಾ. ರತ್ನಾವತಿ ಟಿ ಮುಖ್ಯ ಅತಿಥಿಗಳಾಗಿರಲಿದ್ದಾರೆ, ಎಂದು ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ