ಪಣಜಿ: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಜಾಗ ಕೊಡಿಸಲು ಅಗತ್ಯ ವ್ಯವಸ್ಥೆ ಮಾಡುತ್ತೇನೆ ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಭರವಸೆ ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಮಾಹಿತಿ ನೀಡಿದರು.
ನಾಡೋಜ ಡಾ. ಮಹೇಶ್ ಜೋಷಿ ಹಾಗೂ ಕ.ಸಾ.ಪ ಗೋವಾ ರಾಜ್ಯ ಘಟಕದ ಅಧ್ಯಕ್ಷ ಸಿದ್ಧಣ್ಣ ಮೇಟಿ ಶನಿವಾರ ಸಂಜೆ ಕೇಂದ್ರ ಸಚಿವ ಶ್ರೀಪಾದ ನಾಯ್ಕ ರವರನ್ನು ಭೇಟಿ ಮಾಡಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.
ನಂತರ ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ಗೋವಾದಲ್ಲಿ ಕನ್ನಡ ಭವನ ನಿರ್ಮಾಣದ ಗೋವಾ ಕನ್ನಡಿಗರ ಕನಸು ಶೀಘ್ರವೇ ನನಸಾಗಲಿದೆ. ಈ ಕುರಿತಂತೆ ಕೇಂದ್ರ ಸಚಿವ ಶ್ರೀಪಾದ ನಾಯ್ಕ ಹಾಗೂ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ರವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು ಎಂಬ ಮಾಹಿತಿ ನೀಡಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ