ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಡಳಿತ ಮಂಡಳಿಯ ಜೊತೆ ಉಪನ್ಯಾಸಕರ ಸೌರ್ಹಾದಯುತ ಸಭೆಯು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಯಂ. ಕೃಷ್ಣ ಭಟ್ ವಹಿಸಿದ್ದರು. ನಂತರ ಮಾತನಾಡಿ ಮೌಲ್ಯಯುತ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಅತ್ಯುತ್ತಮ ಪ್ರತಿಭೆಗಳಿಗೆ ಬೆಳಕು ಚೆಲ್ಲುವವರು ಶಿಕ್ಷಕರು. ಒಬ್ಬ ವ್ಯವಸ್ಥಾಪಕ, ಆಪ್ತಸಲಹಾಗಾರ, ಮಾರ್ಗದರ್ಶಿಯ ಪಾತ್ರ ಶಿಕ್ಷಕರದ್ದಾಗಿರುತ್ತದೆ. ನಮ್ಮಲ್ಲಿ ಚೈತನ್ಯ ತುಂಬಿದಾಗ ಮಾತ್ರ ನಾವು ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ ತುಂಬಲು ಸಾಧ್ಯ. ಕಳೆದ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಲು ಉಪನ್ಯಾಸಕರ ನಿರಂತರ ಪರಿಶ್ರಮ ಮತ್ತು ವಿದ್ಯಾರ್ಥಿಗಳಿಗೆ ನೀಡಿದ ಪ್ರೋತ್ಸಾಹದಿಂದ ಸಾಧ್ಯವಾಯಿತು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ಕೋಶಾಧಿಕಾರಿ ಗೋಪಾಲಕೃಷ್ಣ ಭಟ್, ಸದಸ್ಯರಾದ ಕೆ.ಎನ್.ಸುಬ್ರಹ್ಮಣ್ಯ. ಸಚಿನ್ ಶೆಣೈ, ಡಾ. ಮುರಳಿಕೃಷ್ಣ ರೈ, ಡಾ. ಕೃಷ್ಣ ಪ್ರಸನ್ನ ಕೆ, ವತ್ಸಲಾ ರಾಜ್ಞಿ, ಪ್ರಾಂಶುಪಾಲ ಮಹೇಶ ನಿಟಿಲಪುರ ಉಪಸ್ಥಿತರಿದ್ದರು. ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಸ್ವಾಗತಿಸಿ ಸಂಚಾಲಕ ಕೃಷ್ಣಪ್ರಸಾದ್ ನಡ್ಸಾರ್ ವಂದಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ