ಯೂಜೀನ್ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022ರಲ್ಲಿ ಭಾರತ ಜಾವೆಲಿನ್ ತಾರೆ ನೀರಜ್ ಚೋಪ್ರಾ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ. ತಮ್ಮ ಪ್ರಥಮ ಎಸೆತದಲ್ಲಿಯೇ 88.39 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ನೀರಜ್ ಪೈನಲ್ ಪ್ರವೇಶಿಸಿದ್ದರು.
ಚಾಂಪಿಯನ್‌ಶಿಪ್‌ನ ನಾಲ್ಕನೇ ಪ್ರಯತ್ನದಲ್ಲಿ ನೀರಜ್ ಚೋಪ್ರಾ 88.13 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ, ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.