ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಉದ್ಯೋಗ ಮಾಹಿತಿ ಘಟಕ, ಐ.ಕ್ಯೂ.ಎ.ಸಿ. ಹಾಗೂ ಕರ್ನಾಟಕ ಬ್ಯಾಂಕ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ಯಾಂಕಿಂಗ್ ಉದ್ಯೋಗ ತರಬೇತಿ ಹಾಗೂ ಬ್ಯಾಂಕಿನಲ್ಲಿ ಸಿಗುವ ಸವಲತ್ತುಗಳ ಕುರಿತು ವಿಶೇಷ ಉಪನ್ಯಾಸವನ್ನು ಜೂನ್ 30 ರಂದು ಕಾಲೇಜು ಸಭಾಂಗಣದಲ್ಲಿ ನಡೆಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ರಾಜ್ ಕುಮಾರ್, ಜಿ.ಎಂ., ಕರ್ನಾಟಕ ಬ್ಯಾಂಕ್ ಇವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು. ಮತ್ತೋರ್ವ ಮಖ್ಯ ಅತಿಥಿ ಶ್ರೀ ರಾಜಗೋಪಾಲ್, ಎ.ಜಿ,ಎಂ. ಕರ್ನಾಟಕ ಬ್ಯಾಂಕ್ ಇವು ಬ್ಯಾಂಕಿನಲ್ಲಿ ಲಭಿಸುವ ವಿವಿಧ ಆರ್ಥಿಕ ಸವಲತ್ತುಗಳ ಬಗ್ಗೆ ಹಾಗೂ ಸ್ವಉದ್ಯೋಗಕ್ಕೆ ಸಿಗುವ ಸಾಲ ಮತ್ತು ಮತ್ತು ಸಬ್ಸಿಡಿ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ. ಅವರು ಸಿಕ್ಕ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಶ್ರೀ ರವಿ ಉಪಾಧ್ಯಾಯ, ನಿವೃತ್ತ ಮಹಾಪ್ರಬಂಧಕರು, ಕೆನರಾ ಬ್ಯಾಂಕ್ ಇವರು ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಪರೀಕ್ಷೆಯನ್ನು ಎದುರಿಸುವ ಬಗ್ಗೆ ಉಚಿತವಾಗಿ ತರಬೇತಿ ನೀಡುವ ಬಗ್ಗೆ ತಿಳಿಸಿದರು.
ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಮೇವಿ ಮಿರಾಂದ, ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ಶ್ರೀ ಉಮೇಶ್ ಪೈ ಮತ್ತು ಡಾ. ಹೆಚ್.ಕೆ. ವೆಂಕಟೇಶ ಉಪಸ್ಥಿತರಿದ್ದರು. ತೃತೀಯ ಬಿ.ಕಾಂ.ನ ಕು. ರಕ್ಷಾ ಸ್ವಾಗತಿಸಿದರೆ, ಕು. ವೈಶಾಲಿ ವಂದಿಸಿದರು. ಕು. ಸುಷ್ಮಾ ನಿರೂಪಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ