ಉಜಿರೆಯಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Upayuktha
0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಹಿಕ ಭಾಷಾ ವೇದಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಕುಂದಾಪ್ರ ದಿನಾಚರಣೆ ಕಾರ್ಯಕ್ರಮ ನಡೆಯಿತು.


ಪ್ರಾಚಾರ್ಯ ಪ್ರೊ. ದಿನೇಶ ಚೌಟ ಅವರು ಅಧ್ಯಕ್ಷತೆ ವಹಿಸಿದ್ದರು. ಕುಂದಾಪ್ರ ಕನ್ನಡದ ಮಹತ್ವದ ಬಗ್ಗೆ ಎಸ್. ಡಿ. ಎಂ ಕಾಲೇಜಿನ ಪ್ರಾಧ್ಯಾಪಕ ಹರೀಶ್ ಶೆಟ್ಟಿ ಮಾತನಾಡಿದರು. ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಸೋಮಶೇಖರ ಶೆಟ್ಟಿ ಅವರು ಕುಂದಾಪ್ರ ಭಾಷೆಯ ಸೊಗಡಿನ ಬಗ್ಗೆ ವಿವರಿಸಿದರು. ಉಪನ್ಯಾಸಕಿ ಅಮೃತಾ ಶೆಟ್ಟಿ ಹಾಗೂ ಅರ್ಚನಾ ನಾಯಕ್ ಅವರು ಕುಂದಾಪ್ರ ಗೀತೆಗಳನ್ನು ಪ್ರಸ್ತುತ ಪಡಿಸಿದರು. 


ಕಾರ್ಯಕ್ರಮ ಸಂಯೋಜನೆ ಮಾಡಿದ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಕುಂದಾಪ್ರ ಕಥೆ ಪ್ರಸ್ತುತ ಪಡಿಸುವುದರೊಂದಿಗೆ ನಿರೂಪಿಸಿ, ವಂದಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top