ರಕ್ತದಾನ ಮಹದಾನ
ಉಜಿರೆ: ಜೀವನ ಮೌಲ್ಯಗಳು ನಮ್ಮ ಜೀವನದಲ್ಲಿ ಅತ್ಯಂತ ಮಹತ್ವವಾದದ್ದು. ಈ ಮೌಲ್ಯಗಳೊಂದಿಗೆ ಜೀವನ ಸಾರ್ಥಕಗೊಳ್ಳುತದೆ. ರಕ್ತದಾನವು ಮಹದಾನ. ಯುವರೆಡ್ ಕ್ರಾಸ್ ಈ ನಿಟ್ಟಿನಲ್ಲಿ ಉತ್ತಮ ಕಾರ್ಯಗಳನ್ನು ಕೈಗೊಳ್ಳುತ್ತದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥಶ್ವರ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರಾದ ಸಂಪತ್ ಕುಮಾರ್ ಹೇಳಿದರು.
ಅವರು ಶನಿವಾರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆಯಲ್ಲಿ ನಡೆದ 2022-23 ನೇ ಸಾಲಿನ ಯುವ ರೆಡ್ ಕ್ರಾಸ್ ನ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ರಕ್ತ ದಾನಕ್ಕಿಂತ ಮಹತ್ಕಾರ್ಯ ಮತ್ತೊಂದಿಲ್ಲ ಎಂದು ಅವರು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎನ್. ದಿನೇಶ್ ಚೌಟ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಯುವ ರೆಡ್ ಕ್ರಾಸ್ ಯೋಜನಾಧಿಕಾರಿ ಡಾ. ಪ್ಲೇವಿಯಾ ಪೌಲ್, ಸಂಯೋಜಕಿ ಕವನಶ್ರೀ ಜೈನ್, ಹಾಗೂ ಯುವ ರೆಡ್ ಕ್ರಾಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕವನಶ್ರೀ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಅನುಷಾ ಸ್ವಾಗತಿಸಿ, ನಿರೂಪಿಸಿ, ಸ್ವಸ್ತಿ ಅವರು ವಂದಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ