ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Upayuktha
0

ಮಂಗಳೂರು: ಪ್ರಸಕ್ತ ಸಾಲಿನ ಕೃಷಿ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಗೆ ಪತ್ಯೇಕವಾಗಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ರೈತರಿಗೆ 100 ರೂ.ಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ 25 ರೂ.ಗಳ ನೋಂದಣಿ ಶುಲ್ಕವಿದ್ದು, ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು ಹಾಗೂ ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು.


ನಿಬಂಧನೆಗಳೆಂದರೆ, ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ, ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹರಾಗಿರುವುದಿಲ್ಲ, ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದು.


ತಾಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಹಾಗೂ ಜಿಲ್ಲಾ ಮಟ್ಟದಲ್ಲಿ ಬಹುಮಾನ ಪಡೆದವರು ರಾಜ್ಯ ಮಟ್ಟಕ್ಕೆ ಸ್ಪರ್ಧಿಸಬಹುದು. ಆದರೆ ಕೆಳ ಹಂತದ ಸ್ಪರ್ಧೆಗೆ ಸ್ಪರ್ಧಿಸುವಂತಿಲ್ಲ. ಕಟಾವಿಗೆ 15 ದಿನಗಳ ಮುಂಚಿತವಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಕಟಾವು ದಿನಾಂಕ ತಿಳಿಸಬೇಕು.


ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ರೈತರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆ ಪಡೆದು ಕಂದಾಯ ಇಲಾಖೆಯಿಂದ ಪಡೆದ ಪಹಣಿ ಪತ್ರದೊಂದಿಗೆ ಶುಲ್ಕ ಪಾವತಿಸಿ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top