ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯು ಆಗಸ್ಟ್ 5 ರಿಂದ 7 ರವರೆಗೆ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕರ್ನಾಟಕ ಚಿತ್ರಕಲಾ ಪರಿಷತ್, ಕುಮಾರಕೃಪಾ ರಸ್ತೆ, ಬೆಂಗಳೂರು ಇಲ್ಲಿ ಆಯೋಜಿಸುತ್ತಿದೆ.
ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆ.5ರಂದು ಬೆಳಗ್ಗೆ 11.30ಕ್ಕೆ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ.
8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ನೇಕಾರರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆ.7ರಂದು ಬೆಳಗ್ಗೆ 11.30ಕ್ಕೆ ಮಾನ್ಯ ಕೈಮಗ್ಗ ಮತ್ತು ಜವಳಿ, ಸಕ್ಕರೆ ಸಚಿವ ಶಂಕರ್ ಬಿ. ಪಾಟೀಲ್ ಮುನೇನಕೊಪ್ಪ ಅವರು ಉದ್ಘಾಟಿಸಲಿದ್ದಾರೆ.
ಕೈಮಗ್ಗ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನವು ಬೆಳಗ್ಗೆ 11ರಿಂದ ಸಂಜೆ 7.30ರವರೆಗೆ ನಡೆಯಲಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ