ಉಜಿರೆ: ಹೆಗ್ಗೋಡು ನೀನಾಸಂ ಪ್ರತಿಷ್ಠಾನ ಮತ್ತುಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸಂಘದ ಜಂಟಿ ಆಶ್ರಯದಲ್ಲಿ ಕಾಲೇಜಿನಲ್ಲಿ ಇದೇ 19 ಮತ್ತು 20 ರಂದು ಎರಡು ದಿನಗಳಲ್ಲಿ ಆಧುನಿಕ ಕನ್ನಡ ಕಥನ ಸಾಹಿತ್ಯ - ಅಧ್ಯಯನ ಶಿಬಿರ ಆಯೋಜಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ ಹತ್ತು ಗಂಟೆಗೆ ಖ್ಯಾತ ವಿಮರ್ಶಕ ಸಾಗರದ ಪ್ರೊ. ಟಿ.ಪಿ. ಅಶೋಕ ಅಧ್ಯಯನ ಶಿಬಿರವನ್ನು ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲ ಡಾ. ಪಿ.ಎನ್. ಉದಯಚಂದ್ರ ಅಧ್ಯಕ್ಷತೆ ವಹಿಸುವರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಶುಭಾಶಂಸನೆ ಮಾಡುವರು. ಎರಡು ದಿನ ನಡೆಯುವ ಅಧ್ಯಯನ ಶಿಬಿರದಲ್ಲಿ ಸಾಗರದ ಪ್ರೊ. ಜಶ್ವಂತ್ ಜಾದವ್, ಪ್ರೊ. ಎಚ್.ಎಂ. ಶಿವಾನಂದ, ಡಾ. ಮಾಧವ ಚಿಪ್ಪಳಿ ಮತ್ತು ಕುಮಟಾದ ಖ್ಯಾತ ಕತೆಗಾರ ಪ್ರೊ. ಶ್ರೀಧರ್ ಬಳಗಾರ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ, ಮಾರ್ಗದರ್ಶನ ನೀಡುವರು.