ನಿಟ್ಟೆ: ಉಡುಪಿ ಜಿಲ್ಲಾ ರಜತ ಮಹೋತ್ಸವ ಅರ್ಥಪೂರ್ಣವಾಗಿ ಆಚರಿಸುವ ಜೊತೆಯಲ್ಲಿ ಯುವ ಜನತೆಯನ್ನು ಸೈನ್ಯಕ್ಕೆ ಸೇರಲು ಹಾಗೂ ಅಗ್ನಿಪಥ್ ಯೋಜನೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಮತ್ತು ಟೀಮ್ ನೇಶನ್ ಫಸ್ಟ್ ಸಹಭಾಗಿತ್ವದಲ್ಲಿ, ಉಡುಪಿಯ ಶಾಸಕರ ನೇತೃತ್ವದಲ್ಲಿ ಆ.24 ಮತ್ತು 25 ರಂದು ಆಯೋಜಿಸಿರುವ 75 ಕಿ.ಮೀ. ಮ್ಯಾರಥಾನ್ ಓಟ "ಅಗ್ನಿಪಥ್ ದೌಡ್" ನ್ನು ಆ.24 ರಂದು ಕಾರ್ಕಳ ಭುವನೆಂದ್ರ ಕಾಲೇಜಿನಲ್ಲಿ ಚಾಲನೆಗೊಳಿಸಲಾಯಿತು. ಈ ತಂಡವು ನಿಟ್ಟೆ ವಿದ್ಯಾಸಂಸ್ಥೆಯ ಕ್ಯಾಂಪಸ್ ಗೆ 11 ಗಂಟೆಗೆ ತಲುಪಿತು.
'ಅಗ್ನಿಪಥ್ ದೌಡ್' ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡವರಿಗೆ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಎನ್. ವಿನಯ್ ಹೆಗ್ಡೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ವಿ. ಸುನೀಲ್ ಕುಮಾರ್, ಉಡುಪಿಯ ಶಾಸಕರಾದ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್, ಕ್ಯಾಂಪಸ್ ಮೈಂಟೆನೆನ್ಸ್ ಡೆವಲಪ್ಮೆಂಟ್ ನಿರ್ದೇಶಕ ಯೋಗೀಶ್ ಹೆಗ್ಡೆ, ಉಡುಪಿ ಜಿಲ್ಲಾ ಅಮೆಚೂರ್ ಎಥ್ಲೆಟಿಕ್ ಎಸೋಸಿಯೇಶನ್ ನ ಮಾಜಿ ಅಧ್ಯಕ್ಷ ಅಶೋಕ್ ಅಡ್ಯಂತಾಯ, ನಿಟ್ಟೆ ಪಂಚಾಯತ್ ಅಧ್ಯಕ್ಷ ಸತೀಶ್ ಉಪಸ್ಥಿತರಿದ್ದರು.
ಟೀಮ್ ನೇಶನ್ ಫಸ್ಟ್ ಉಡುಪಿ ಅಧ್ಯಕ್ಷರಾದ ಸೂರಜ್ ಮತ್ತು ಅವರ ತಂಡದ ಕಾರ್ಯವನ್ನು ಗಣ್ಯರು ಇದೇ ಸಂದರ್ಭದಲ್ಲಿ ಶ್ಲಾಘಿಸಿದರು.