ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎನ್‍ಬಿಎ ಮಾನ್ಯತೆ ವಿಸ್ತರಣೆ

Upayuktha
0


ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ಹಾಗೂ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನೀಕೆಷನ್ ಇಂಜಿನಿಯರಿಂಗ್ ವಿಭಾಗಕ್ಕೆ ಈ ಹಿಂದೆ ಲಭಿಸಿದ್ದ ಎನ್‍ಬಿಎ ಮಾನ್ಯತೆಯನ್ನು ಮುಂದಿನ ಮೂರು ಶೈಕ್ಷಣಿಕ ವರ್ಷಗಳಿಗೆ ವಿಸ್ತರಿಸಲಾಗಿದೆ. 


ದೆಹಲಿಯ ಎನ್‍ಬಿಎ (ರಾಷ್ಟ್ರೀಯ ಮಾನ್ಯತಾ ಮಂಡಳಿಯ) ತಜ್ಞರ ತಂಡವು ಕಾಲೇಜಿನ ಇಂಜಿನಿಯರಿಂಗ್ ವಿಭಾಗಗಳ ಮೂಲಸೌಕರ್ಯ, ಬೋಧನೆ ಮತ್ತು ಕಲಿಕೆಯ ವಿಧಾನಗಳು, ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳು, ಪ್ರಕಟಣೆಗಳು, ಉದ್ಯಮಶೀಲ ಅಭಿವೃದ್ಧಿ ಚಟುವಟಿಕೆಗಳು, ವಿವಿಧ ರಾಜ್ಯ ಮತ್ತು ಕೇಂದ್ರ ಹಣಕಾಸು ಸಂಸ್ಥೆಗಳ ಅನುದಾನಗಳು, ವಿವಿಧ ಸಂಶೋಧನಾ ಸಂಸ್ಥೆಗಳು ಹಾಗೂ ಕೈಗಾರಿಕೆಗಳೊಂದಿಗೆ ಒಡಂಬಡಿಕೆಗಳನ್ನು ಪರಿಶೀಲಿಸಿ ಮೌಲ್ಯಮಾಪನ ನಡೆಸಿದೆ. 


ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್, ಡೀನ್ ಡಾ. ದತ್ತಾತ್ರೇಯ ಹರ್ಷ ಎನ್‍ಬಿಎ ಮಾನ್ಯತೆಯು ವಿದ್ಯಾರ್ಥಿಗಳಿಗೆ ವಿದೇಶಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದರು.  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top