ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕಲ್ಲಬೆಟ್ಟು ಇದರ ಸಹಯೋಗದಲ್ಲಿ ನಡೆದ ‘ಜಿಲ್ಲಾಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಚೆಸ್ ಟೂರ್ನಮೆಂಟ್’ ನಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆ ಇಲ್ಲಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಹುಡುಗಿಯರ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ಪ್ರಿಯದರ್ಶಿನಿ ಎಂ (ದ್ವಿತೀಯ ಪಿಯುಸಿ) ಹಾಗೂ ಭೂಮಿಕಾ ಎಂ (ಪ್ರಥಮ ಪಿಯುಸಿ) ಇವರು ಪ್ರಥಮ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹುಡುಗರ ವೈಯಕ್ತಿಕ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಓಜಸ್ವಿ ಎಂ ಆರ್ (ದ್ವಿತೀಯ ಪಿಯುಸಿ) ಹಾಗೂ ಆರ್ಯನ್ ರಾವ್ (ಪ್ರಥಮ ಪಿಯುಸಿ) ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.