ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ, ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ದೇಶಭಕ್ತಿಗೀತೆ, ಭಾಷಣ, ಪ್ರಬಂಧ, ರಸಪ್ರಶ್ನೆ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.
ಆಗಸ್ಟ್ 8 ರಂದು ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸ್ಪರ್ಧೆಗಳು ಆಯೋಜನೆಗೊಳ್ಳಲಿವೆ. ಆಸಕ್ತ ವಿದ್ಯಾರ್ಥಿಗಳು ಆಗಸ್ಟ್ 6ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9741481600 / 8197251489